ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಶೃಂಗೇರಿ ಶಾರದಾ ಪೀಠಕ್ಕೆ ಅಕ್ಟೋಬರ್ 8ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ ಶುಕ್ರವಾರದಂದು ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಅಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಶೃಂಗೇರಿ ಮಠದಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮ ನಡೆಯಲಿದೆ. ಶಾರದಾಂಬೆ ದರ್ಶನದ ಜತೆಗೆ ಹಿರಿಯ ಹಾಗೂ ಕಿರಿಯ ಶ್ರೀಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.
ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಅ. 7ರಂದು ಸಂಜೆ ಮಂಗಳೂರಿಗೆ ತೆರಳಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅ. 8ರಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ರಾಮನಾಥ್ ಕೋವಿಂದ್ ದೆಹಲಿಗೆ ತೆರಳಲಿದ್ದಾರೆ.