ಬೆಂಗಳೂರು, (www.thenewzmirror.com):
ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಇತ್ತೀಚಿನ ರಾಜಕಾರಣಿಗಳು, ಸೆಲೆಬ್ರಿಟಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಿಂದ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡುತ್ತದೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಅನಾಥ ಮಕ್ಕಳ ಆಶ್ರಮದಲ್ಲಿ ಹುಟ್ಟು ಹಬ್ಬ ಆಚರಣೆ ಮಾಡುವುದರಿಂದ ಮಕ್ಕಳ ಮನಸ್ಸಿನಲ್ಲಿ ತಾವು ಕೀಳು ಎಂಬ ಭಾವನೆ ಬರಬಹುದು ಎಂದು ಅಭಿಪ್ರಾಯ ಕೇಳಿ ಬರುತ್ತಿದೆ.
ಇಂಥ ತಾರತಮ್ಯ ಭಾವನೆ ಹೆಚ್ಚಾಗಿ ಖಿನ್ನತೆ ಕಾರಣವಾಗಬಹುದು. ಹೀಗಾಗಿ ಆಶ್ರಮಗಳಲ್ಲಿ ಅದ್ದೂರಿ ಬರ್ತಡೇ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಹೊರಗಿನಿಂದ ಬಂದು ಹುಟ್ಟುಹಬ್ಬ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಕುರಿತಾಗಿ ನಿರ್ಬಂಧ ಹೇರಲಾಗಿದ್ದು, ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿದರೆ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದೂ ತಿಳಿಸಿದೆ.