ಬೆಂಗಳೂರು,(www.thenewzmirror.com):
ಅಚ್ಚರಿ ಅನಿಸಿದರೂ ಇದು ನಂಬಲೇಬೇಕಾದ ಸ್ಟೋರಿ.., ಸಿಲಿಕಾನ್ ಸಿಟಿಯಲ್ಲಿ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆಯಂತೆ ಪಡಿತರ. ಈ ಕುರಿತ ಚಿಂತನೆ ರಾಜ್ಯ ಸರ್ಕಾರ ಮಾಡುತ್ತಿದ್ದು, ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ಆದೇಶ ಹೊರಬೀಳೋ ಸಾಧ್ಯತೆಯಿದೆ.

ಈಗಾಗಲೇ ನೆರೆಯ ಆಂಧ್ರಪ್ರದೇಶದ ಮಾದರಿಯಲ್ಲಿ ಪಡಿತರ ಚೀಟಿದಾರರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಆಹಾತ ಸಚಿವ ಉಮೇಶ್ ಕತ್ತಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ್ದು, ಈ ಯೋಜನೆ ಪ್ರಾಯೋಗಿಕ ಜಾರಿಗೆ ತರುವ ಬಗ್ಗೆ ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.
ಆರಂಭದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತರಲು ಮುಂದಾಗಿದ್ದು ಮನೆ ಮನೆಗೂ ಪಡಿತರ ತಲುಪಿಸಲು 700 ವಾಹನಗಳು ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.
ಈಗಾಗಲೆರ ಜಾರಿಯಲ್ಲಿರೋ ಆಂಧ್ರದಲ್ಲಿ ಪಡಿತರ ಸಾಗಿಸುವ ವಾಹನದ ಮಾಲೀಕರಿಗೆ ಪ್ರತಿ ಕೆ.ಜಿ.ಗೆ ₹ 1ರಷ್ಟು ಸಾಗಣೆ ವೆಚ್ಚ ನೀಡಲಾಗುತ್ತದೆ. ಅದೇ ದರವನ್ನು ರಾಜ್ಯದಲ್ಲೂ ನಿಗದಿಪಡಿಸುವ ಪ್ರಸ್ತಾವವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.