ಬೆಂಗಳೂರು,(www.thenewzmirror.com ):
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತಗಳಲ್ಲಿಯೂ ಒಂದೊಂದು ಕೋವಿಡ್ ಆರೈಕೆ ಕೇಂದ್ರವನ್ನು ಗುರುತಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾರೆ.
ನಂದಿನಿ ಲೇಔಟ್ ನಲ್ಲಿ ಸ್ಥಾಪಿಸಿರೋ ಕೋವಿಡ್ ಆರೈಕೆ ಕೇಂದ್ರ(CCC) ಪರಿಶೀಲನೆ ವೇಳೆ ಈ ಸೂಚನೆ ಕೊಟ್ಟಿದ್ದಾರೆ. ನಗರದಲ್ಲಿ ಕೋವಿಡ್ ಸೋಂಕು ವೈರಾಣು ದಿನೇ ದಿನೆ ಏರಿಕೆಯಾಗುತ್ತಿವೆ. ಈ ಸಂಬಂಧ ಪಾಲಿಕೆ ವ್ಯಾಪ್ತಿಯ ಆಯಾ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕೋವಿಡ್ ಆರೈಕೆ ಕೇಂದ್ರಗಳ ಪೈಕಿ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದೊಂದು ಕೋವಿಡ್ ಆರೈಕೆ ಕೇಂದ್ರವನ್ನು ಗುರುತಿಸಿ ಎಲ್ಲಾ ರೀತಿಯ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಬೇಕು ಆದೇಶ ನೀಡಿದರು.
ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುತಿಸಿರುವ ಕೋವಿಡ್ ಆರೈಕೆ ಕೇಂದ್ರದ ಹೆಸರು ಮತ್ತು ವಿಳಾಸ, ಒಟ್ಟು ಹಾಸಿಗೆಗಳ ಸಂಖ್ಯೆ, ಆಕ್ಸಿಜನ್ ಬೆಡ್‌ಗಳ ಸಂಖ್ಯೆ, ಲಭ್ಯವಿರುವ ಸಿಲೆಂಡ್‌ರ್‌ಗಳು/ಆಕ್ಸಿಜನ್ ಕಾನ್ಸನ್ ಟ್ರೇಟರ್ಸ್ ಗಳ ಸಂಖ್ಯೆ ಸೇರಿದಂತೆ ಇನ್ನಿತರೆ ಮಾಹಿತಿನ್ನು ಕೂಡಲೆ ಸಂಗ್ರಹಿಸಿ ಮಾಹಿತಿ ನೀಡಲು ಮುಖ್ಯ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.
ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೊಂದು ಕೋವಿಡ್ ಆರೈಕೆ ಕೇಂದ್ರಗಳನ್ನು ಗುರುತಿಸಲು ತಿಳಿಸಲಾಗಿದೆ. ಈ ಸಂಬಂಧ ರೋಗ ಲಕ್ಷಣಗಳು ಕಡಿಮೆಯಿರುವವರು ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದಿದ್ದರೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.