ಬೆಂಗಳೂರು, (www.thenewzmirror.com):
ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟುಹಾನಿಯುಂಟಾಗ್ತಿದೆ.., ಈ ನಿಟ್ಟಿನಲ್ಲಿ ನಿನ್ನೆ ಮುಖ್ಯಮಂತ್ರಿ ದಿಢೀರ್ ವಿಸಿಟ್ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ರು.
ಪರಿಶೀಲನೆ ವೇಳೆ ಮಳೆಹಾನಿಯ ತಡೆಗಾಗಿ ವಿವಿಧ ಇಲಾಖೆಗೆಳ ಮಧ್ಯೆ ಸಮನ್ವಯತೆ ಕಾಯ್ದುಕೊಳ್ಳಲು ಸೂಚಿಸಿದ್ದರು. ಇದರ ಬೆನ್ನಲ್ಲೇ ಇಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿದ್ರು.
ಸಭೆಯಲ್ಲಿ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಮತ್ತು ಮೆಟ್ರೋ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ರಾಕೇಶ್ ಸಿಂಗ್, ಮಳೆಯಿಂದ ಆಗಿರುವ ಹಾನಿ ಮತ್ತು ರಸ್ತೆ ಗುಂಡಿ ನಿರ್ವಹಣೆಗೆ ತಾಕೀತು ಮಾಡಿದರು.
ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಬಡೆದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಲಮಂಡಳಿ ಮುಖಸ್ಥ ಜಯರಾಂ, ಬಿಎಂ ಆರ್ ಸಿಎಲ್ ಮುಖ್ಯಸ್ಥ ಅಂಜುಂ ಪರ್ವೇಜ್ ಸೇರಿದಂತೆ ಹಲವು ಇಲಾಖೆಗೆಳ ಮುಖ್ಯಸ್ಥರು ಉಪಸ್ಥಿತರಿದ್ದರು.