ಬೆಂಗಳೂರು,(www.thenewzmirror.com) :
ದ್ವಿ ಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳ್ತಿದ್ದ ಬಾಲಕಿಗೆ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.., ಪರಿಣಾಮ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕಲ್ಲರ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆಗಿದ್ದ ನಮ್ಮಮ್ಮ ಸೂಪರ್ ಸ್ಟಾರ್ ನಲ್ಲಿ ಭಾಗಿಯಾಗಿದ್ದ ಸಮನ್ವಿ ಕಡಿಮೆ ಅವಧಿಯಲ್ಲೇ ಜನಪ್ರಿಯತೆ ಗಳಿಸಿದ್ದಳು.
ಶಾಪಿಂಗ್ ಮುಗಿಸಿಕೊಂಡು ಮಗುವನ್ನ ಬೈಕ್ ಹಿಂಬದಿ ಕುರಿಸಿಕೊಂಡು ಹೋಗ್ತಿದ್ದ ಅಮೃತ ನಾಯ್ಡು, ಕನಕಪುರ ರಸ್ತೆಯಲ್ಲಿರುವ ಮನೆಗೆ ಹೋಗ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಅಮೃತ ಹಾಗೂ ಸಮನ್ವಿ. ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಿಂದ ಸಣ್ಣಪುಟ್ಟ ಗಾಯಗಳಿಂದ ಅಮೃತಾ ನಾಯ್ಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದ ಕುಮಾರ ಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.