ಬೆಂಗಳೂರು,(www.thenewzmirror.com):
ಕರೋನಾದ ನಡುವೆಯೂ KSETC ಗೆ ಮತ್ತೊಂದು ಮೂಲದಿಂದ ಆದಾಯ ಬಂದಿದೆ. ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಟಿಕೆಟ್ ರಹಿತ ಪ್ರಯಾಣಿಕರಿಂದ 5,36,420ರೂ. ವಸೂಲಿ ಮಾಡಿದೆ.
ನಿಗಮ ಹೊರಡಿಸಿರುವ ಪ್ರಕಟಣೆ ಪ್ರಕಾರ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 62,080ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ. ಒಟ್ಟು 44577 ವಾಹನಗಳನ್ನು ತನಿಖೆಗೊಳಪಡಿಸಿ, 3095 ಪ್ರಕರಣಗಳನ್ನು ಪತ್ತೆ ಹಚ್ಚಿ, 3495 ಟಿಕೇಟ್ ರಹಿತ ಪ್ರಯಾಣಿಕರಿಂದ 5,36,420ರೂ. ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.
ಹೀಗಾಗಿ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮ ಕೋರಿದೆ.