ಮುಂಬೈ/ ಬೆಂಗಳೂರು, (www.thenewzmirror.com) :
ಭಾರತ ತಂಡದ ಅದ್ಭುತ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ಬೆನ್ನಲ್ಲಿಯೇ 33 ವರ್ಷದ ವಿರಾಟ್ ಕೊಹ್ಲಿ ತಮ್ಮ ನಿರ್ಧಾರವನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.
ಎಂಎಸ್ ಧೋನಿ ಟೆಸ್ಟ್ ತಂಡಕ್ಕೆ ರಾಜೀನಾಮೆ ಸಲ್ಲಿಸಿದ್ದಾಗ ದೀರ್ಘ ಮಾದರಿಯ ಕ್ರಿಕೆಟ್ ಗೆ ಭಾರತ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ವಿರಾಟ್ ಕೊಹ್ಲಿ, ತಂಡವನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ನಂ.1 ಪಟ್ಟಕ್ಕೇರಿಸಿದ್ದು. ಅಲ್ಲದೆ, ಮೊದಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ತಂಡವನ್ನು ಫೈನಲ್ ಗೇರಿಸಿದ ಸಾಧನೆ ಮಾಡಿದ್ದರು.
ದಕ್ಷಿಣ ಆಫ್ರಿಕಾ ನೆಲದಲ್ಲಿ ಸರಣಿ ಸೋಲಿನ ಹಿನ್ನಲೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ ಅಂತ ಹೇಳಲಾಗುತ್ತಿದೆಯಾದರೂ ಅಸಲಿ ಕಾರಣವೇ ಬೇರೆ.., ಕೋಯ್ಲಿ ಅವ್ರ ಈ ನಿರ್ಧಾರದಿಂದ ಎರಡು ತಿಂಗಳ ಅವಧಿಯಲ್ಲಿ ಮೂರೂ ಮಾದರಿಯ ಕ್ರಿಕೆಟ್ ನ ನಾಯಕ ಸ್ಥಾನದಿಂದ ಪದಾತ್ಯಾಗ ಮಾಡಿದಂತಾಗಿದೆ ಕೊಯ್ಲಿ