ಬೆಂಗಳೂರು,(www.thenewzmirror.com):
ತಮಿಳುನಾಡಿನ ಕುನ್ನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶರಾಗಿದ್ದಾರೆ. ಕಳೆದ ಏಳು ದಿನಗಳಿಂದ ಅವ್ರು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗ್ರೂಫ್ ಕ್ಯಾಪ್ಟನ್ ವರುಣ್ ಸಿಂಗ್ ಅವ್ರನ್ನ ಉತ್ತಮ ಚಿಕಿತ್ಸೆಗಾಗಿ ತಮಿಳುನಾಡಿನ ವೆಲ್ಲಿಂಗ್ಟನ್ ನಿಂದ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವ್ರು ಮೃತಪಟ್ಟಿದ್ದಾರೆ.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಡಿಸೆಂಬರ್ 8 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸತತ 7 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ವರುಣ್ ಸಿಂಗ್ ಸಾವಿನ ನಂತರ ಈ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದು, ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಬರೆದಿದ್ದಾರೆ, ‘ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸಂಪೂರ್ಣ ಹೆಮ್ಮೆ, ಧೈರ್ಯ ಮತ್ತು ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ದೇಶಕ್ಕಾಗಿ ಅವರ ಅದಮ್ಯ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಓಂ ಶಾಂತಿ.