ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನೊಟೀಸ್

ಬೆಂಗಳೂರು,(www.thenewzmirror.com):

ಫೀಟಲ್ ಮೆಡಿಸನ್ ತರಬೇತಿಯನ್ನು ಸರ್ಕಾರದ ಅನುಮತಿ ಪಡೆಯದೇ ಅನಧಿಕೃತವಾಗಿ ನಡೆಸುತ್ತಿರುವುದಲ್ಲದೇ ಕೆ.ಎಂ.ಸಿ ನೋಂದಣಿ ಇಲ್ಲದೇ ಇರುವ ಹಲವು ವಿಧ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಕಂಡುಬಂದಿರುವ ಹಿನ್ನೆಲೆ ನಗರದ ಯಶವಂತಪುರದಲ್ಲಿರುವ ಸ್ಪರ್ಶ್ ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ.

RELATED POSTS

ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್ ಗುಳೂರು ಅವ್ರ ನೇತೃತ್ವದಲ್ಲಿ ನೊಟೀಸ್ ನೀಡಲಾಗಿದೆ.
ಗರ್ಭಧಾರಣಾ ಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಅಧಿನಿಯಮ, (ಪಿಸಿಪಿಎನ್ ಡಿಟಿ) 1994ರನ್ವಯ ಬೆಂಗಳೂರು ನಗರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ವತಿಯಿಂದ ನೊಟೀಸ್ ನೀಡಲಾಗಿದೆ ಎಂದು ತಿಳಿಸಿದರು.

ಒಟ್ಟು 11 ಸ್ಕ್ಯಾನಿಂಗ್ ಯಂತ್ರಗಳಿಗೆ ಪರವಾನಗಿ ಪಡೆದು ಬಳಸಲಾಗುತ್ತಿದೆ. ಸ್ಕ್ಯಾನಿಂಗ್ ಮುನ್ನ ಫಾರಂ ಎಫ್ ನ್ನು ಕಡ್ಡಾಯವಾಗಿ ಆನ್ ಲೈನ್ ಸಲ್ಲಿಸಿ ನಂತರವೇ ಸ್ಕ್ಯಾನಿಂಗ್ ಮಾಡಬೇಕು. ಆದರೆ, ಇಲ್ಲಿ ಸ್ಕ್ಯಾನಿಂಕ್ ಮಾಡಿದ ನಂತರ ಸಂಜೆ ವೇಳೆಗೆ ಆನ್ ಲೈನ್ ಮಾಹಿತಿ ಅಪ್ ಲೋಡ್ ಮಾಡಲಾಗುತ್ತಿರುವುದು ಕಂಡುಬಂದಿದೆ. ಅಲ್ಲದೇ, ಸ್ಕ್ಯಾನಿಂಗ್ ಕೊಠಡಿಯಲ್ಲಿ ಬ್ರೂಣದ ಚಿತ್ರವನ್ನು ದೊಡ್ಡ ಟಿ.ವಿಯಲ್ಲಿ ಬಿತ್ತರಿಸಿ ತೋರಿಸುವ ವ್ಯವಸ್ಥೆ ಮಾಡಲಾಗಿರುವುದು ಕಾನೂನು ಬಾಹಿರವಾಗಿದೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದು ಅವರು ತಿಳಿಸಿದರು.

ತಪಾಸಣಾ ಭೇಟಿಯಲ್ಲಿ ಸಮಿತಿ ಸದಸ್ಯರಾದ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಬೆಂಗಳೂರು ಉತ್ತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಹಾಗೂ ವಿಝನ್ ಬೆಂಗಳೂರು ಟ್ರಸ್ಟ್‌ನ ವಸಂತ ಕುಮಾರ್ ಹಾಜರಿದ್ರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist