ನಾನೇನೂ ತಪ್ಪು ಮಾಡಿಲ್ಲ ; ರವಿ ಚೆನ್ನಣ್ಣನವರ್ ಸ್ಪಷ್ಟನೆ..!

ಬೆಂಗಳೂರು,(www.thenewzmirror.com) ;


IPS ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವ್ರ ಅಕ್ರಮ ಆಸ್ತಿ ಕುರಿತಂತೆ ತಮ್ಮ ಮೇಲೆ ಬಂದಿರೋ ಆರೋಪಕ್ಕೆ ಕುರಿತಂತೆ ರವಿ ಡಿ ಚೆನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಅವ್ರ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಸತ್ಯಕ್ಕೆ ದೂರವಾದದ್ದು ಅಂತ ಸ್ಪಷ್ಟಪಡಿಸಿದ್ದಾರೆ.

RELATED POSTS

ಸುಮಾರು ಒಂದು ಪುಟದ ಪತ್ರ ಬರೆದು ಅದರಲ್ಲಿ ಸ್ಪಷ್ಟನೆ ನೀಡಿರೋ IPS ಅಧಿಕಾರಿ, ನನ್ನ ಮೇಲೆ ಬಂದಿರುವ ಆರೋಪಗಳು ಶುದ್ದ ಸುಳ್ಳು. ನನ್ನ ವಿರುದ್ಧ ತೇಜೋವಧೆ ಮಾಡಿದವರ ಕಾನೂನು ಹೋರಾಟ ನಡೆಸುತ್ತಿರುವುದಾಗಿ ಸ್ಪಷ್ಟನೆ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಹಾಗೂ ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿದೆ. ಎಂದೂ ತಿಳಿಸಿದ್ದಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದಾರೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ.ಆದ್ದರಿಂದ ಈ ಕುರಿತಂತೆ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನು ಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೇನೆ.

  1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ
  2. ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ 3 ಕೋಟಿ ರೂ.ಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ
  3. ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ 2 ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು. ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಇನ್ನು ರವಿ ಡಿ ಚೆನ್ನಣ್ಣನವರ್ ಪತ್ರ ವೈರಲ್ ಆಗ್ತಿದ್ದಂತೆ ಫೇಸ್ ಬುಕ್ ಮೂಲಕ ಪ್ರತಿಕ್ರಿಯೆ ನೀಡಿರೋ ವಕೀಲ ಜಗದೀಶ್, ನಾನು ಮಾಡಿರೋ ಆರೋಪ ಸುಳ್ಳು ಎಂದಾದರೆ ನನ್ನ ಮೇಲೆ ಕೇಸ್ ದಾಖಲು ಮಾಡಲಿ ಅಂತ ಸವಾಲು ಹಾಕಿದ್ದಾರೆ. ನಾನು ಕಾನೂನು ಹೋರಾಟ ಆರಂಭಮಾಡಿಯಾಗಿದ್ದು, ಅದನ್ನ ಮುಂದುವರೆಸುತ್ತೇನೆ ಅಂತಾನೂ ಹೇಳಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist