ಬೆಂಗಳೂರು,(www.thenewzmirror.com) :
ನಗರದ ಟೌನ್ ಹಾಲ್ ಮುಂದೆ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ವಿಜಯವಾಣಿ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.
ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೈಕ್ ನಲ್ಲಿ ಸಂಜೆ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು.
ಸ್ಥಳದಲ್ಲಿದ್ದ ಜನ ಮತ್ತು ಪೊಲೀಸ್ ಗಾಯಾಳುವನ್ನು ಸಮೀಪದ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿಲಾಯಿತಾದರೂ ಚಿಕಿತ್ಸೆ ಫಕಾರಿಯಾಗದೇ ಕೊನೆಯುಸಿರೆಳೆದರು.
ಗಂಗಾಧರ ಮೂರ್ತಿ ಸೇವೆ ಗುರುತಿಸಿ ಕಳೆದ ವರ್ಷ ಕಂದಾಯ ಭವನದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿಬೆಂಗಳೂರು ಕಾರ್ಯ ನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.
ಪತ್ರಕರ್ತ ಗಂಗಾಧರ ಮೂರ್ತಿ ಯವರ ಅಕಾಲಿಕ ನಿಧನಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ ಜಿಲ್ಲಾಡಳಿತದ ಪರವಾಗಿ ಸಂತಾಪ ಸೂಚಿಸಿದ್ದಾರೆ, ರಾಜ್ಯ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ , ವಿಜಯವಾಣಿ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮೃತರ ಪಾರ್ಥಿವ ಶರೀರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಂಬಂಧಿಗಳಿಗೆ ಸಂಜೆ ಹಸ್ತಾಂತರಿಸಲಾಯಿತು, ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶೃಂಗೇರಿಯಲ್ಲಿ ನಾಳೆ ಮಧ್ಯಾಹ್ನ ಜರುಗಲಿದೆ ಎಂದು ಎಂದು ಮೂಲಗಳು ತಿಳಿಸಿವೆ.