ಬೆಂಗಳೂರು, (www.thenewzmirror.com) :
ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರಿಂ ಕೊಟ್ಟಿರೋ ಸೂಚನೆ ಚುನಾವಣೆಗೆ ಕ್ಷಣಗಣನೆ ಆರಂಭವಾದಂತೆ ಆಗಿದೆ.
ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಲು 8 ವಾರ ಕಾಲಾವಕಾಶವನ್ನ ಸುಪ್ರಿಂ ನೀಡಿದೆ. ಅಷ್ಟೆ ಅಲ್ಲದೆ 8 ವಾರಗಳಲ್ಲಿ ಈ ಎಲ್ಲಾ ಪ್ರಕ್ರಿಯೆ ಮುಗಿಸಬೇಕು ಅಂತಾನೂ ಹೇಳಿದೆ.
ರಾಜ್ಯ ಸರ್ಕಾರ ರಚನೆ ಮಾಡಿದ ಮರುವಿಂಗಡನಾ ಆಯೋಗಕ್ಕೆ ಸುಪ್ರೀಂಕೋರ್ಟ್ ಈ ಸೂಚನೆ ಕೊಟ್ಟಿದ್ದು,ನಂತರ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗ ಶುರು ಮಾಡಬೇಕು ಅಂತಾನೂ ಹೇಳಿದೆ.
ಈ ಮೂಲಕ ಮಹತ್ವದ ಆದೇಶ ನೀಡಿದ ಸುಪ್ರೀಂಕೋರ್ಟ್, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ತಿದ್ದುಪಡಿ ಕಾಯ್ದೆ ಅನುಸಾರ ರಚನೆಗೊಂಡಿದ್ದ ಮರು ವಿಂಗಡನಾ ಆಯೋಗ ಹೇಳಿದ್ದು, ಒಬಿಸಿ ಮೀಸಲಾತಿ ಪ್ರಕ್ರಿಯೆ ಕೂಡ 8 ವಾರಗಳಲ್ಲಿ ಪೂರ್ಣಗೊಳಿಸುವಂತೆ ಹೇಳಿದೆ.
ಇದೆಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರಾಜ್ಯ ಸರ್ಕಾರ ಈ ಪ್ರಕ್ರಿಯೆ ಪೂರ್ಣಗೊಳಿಸಿದ ಬಗ್ಗೆ ನೋಟಿಫಿಕೇಶನ್ ಹೊರಡಿಸುವಂತೆ ಸುಪ್ರೀಂಕೋರ್ಟ್ ಸೂಚನೆ ಕೊಟ್ಟಿದೆ.
ರಾಜ್ಯ ಸರ್ಕಾರದ ಪರ ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ ಭರವಸೆ ನೀಡಿದ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೋಟಿಫಿಕೇಶನ್ ಜಾರಿಯಾಗಿ ಬಿಬಿಎಂಪಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು ಅಂತ ಹೇಳಿದೆ.
ಚುನಾವಣೆ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಎಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ಚುನಾವಣೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದೂ ಸುಪ್ರಿಂ ಅಭಿಪ್ರಾಯ ಪಟ್ಟಿದೆ.