ಬೆಂಗಳೂರು,(www.thenewzmirror.com) :
ಕೋವಿಡ್ ಸಮಯದಲ್ಲೂ ಬೆಂಗಳೂರಿಗೆ ವಿದೇಶದಿಂದ ಪ್ರತಿ ದಿನ ಸಾವಿರಾರು ಪ್ರಯಾಣಿಕ್ರು ಆಗಮಿಸುತ್ತಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆ ಕೊಟ್ಟಿರುವ ಮಾಹಿತಿ ಪ್ರಕಾರ ಪ್ರತಿ ದಿನ ನಗರಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರೋಬ್ಬರಿ 2500 ಪ್ರಯಾಣಿಕ್ರು ಆಗಮಿಸುತ್ತಿದ್ದಾರೆ.
ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಯಾವುದೇ ದೇಶಗಳಿಂದ ಬಂದ ಪ್ರಯಾಣಿಕರಿಗೂ ಪರೀಕ್ಷೆಗೆ ಸರ್ಕಾರ ತೀರ್ಮಾನ ಮಾಡಿದ ಹಿನ್ನಲೆಯಲ್ಲಿ ಎಲ್ಲರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ ಅಂತ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದರು.
ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ವಿದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ನೆಗೆಟಿವ್ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ, ನೆಗೆಟಿವ್ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ. ಎ ಸಿಂಪ್ಟಮ್ಯಾಟಿಕ್ ಆದವರಿಗೆ 7 ನೇ ದಿನ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಆದರೆ ಇಂಥವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ವಿವರಿಸಿದರು.