ಬೆಂಗಳೂರಿನಲ್ಲಿ ಜನವರಿ 31 ರ ವರೆಗೂ ಶಾಲೆ ಓಪನ್ ಆಗಲ್ಲ

ಬೆಂಗಳೂರು,(www.thenewzmirror.com):

‘ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಜನವರಿ 31ರವರೆಗೆ 1ರಿಂದ 9ನೇ ತರಗತಿಗಳ ಭೌತಿಕ ತರಗತಿಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ಸ್ಥಗಿತಗೊಳಿಸಲಾಗುತ್ತದೆ. ಆನ್‌ಲೈನ್ ಹಾಗೂ ಪರ್ಯಾಯ ಬೋಧನೆ ಮುಂದುವರೆಯಲಿದೆ’ ಎಂದು ಸಚಿವರು ತಿಳಿಸಿದರು.

RELATED POSTS

ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‌ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್‌ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ರಾಜ್ಯದಲ್ಲಿ 860 ಶಾಲಾ ಮಕ್ಕಳು 85 ಶಿಕ್ಷಕರಿಗೆ ಮಹಾಮಾರಿ

ರಾಜ್ಯಾದ್ಯಂತ ಜ.10ರ ವೇಳೆಗೆ 1ರಿಂದ 10ನೇ ತರಗತಿವರೆಗಿನ ಒಟ್ಟು 860 ಶಾಲಾ ವಿದ್ಯಾರ್ಥಿಗಳು ಹಾಗೂ 85 ಶಿಕ್ಷಕರು ಕೋವಿಡ್‌ ಸೋಂಕಿಗೀಡಾಗಿರುವುದು ಕಂಡುಬಂದಿದೆ. ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಶೈಕ್ಷಣಿಕ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾಜಿಲ್ಲೆಗಳಲ್ಲೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ  ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ. ವಿದೇಶಗಳಲ್ಲಿ ಮತ್ತು ಭಾರತದಲ್ಲಿ ವರದಿಯಾಗಿರುವ ಪ್ರಕರಣಗಳನ್ನು ಗಮನಿಸಿದರೆ ತೀವ್ರತೆ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಅಪಾಯ ಕಡಿಮೆ ಕಾಣಿಸುತ್ತಿದೆ ಎಂದು ತಜ್ಞರು ತಿಳಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಸೋಂಕು ಬಾಧಿಸುವ ಪ್ರಮಾಣ ಈವರೆಗಿನ ಮಾಹಿತಿ ಪ್ರಕಾರ ಕಡಿಮೆಯೇ ಇದೆ. ಹೀಗಾಗಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ಅಗತ್ಯತೆ ಕಂಡು ಬಂದಿಲ್ಲ. ಈ ಕುರಿತು ತಜ್ಞರ ಜೊತೆ ವಿವರವಾಗಿ ಚರ್ಚಿಸಲಾಗಿದೆ’ ಎಂದು ಸಚಿವ ನಾಗೇಶ್ ತಿಳಿಸಿದರು.

ಮಕ್ಕಳು ಶೈಕ್ಷಣಿಕವಾಗಿ ಈಗಾಗಲೇ ಸಾಕಷ್ಟು ಕಳೆದುಕೊಂಡಿದ್ದಾರೆ. ಮತ್ತಷ್ಟು ಕಳೆದುಕೊಳ್ಳುವುದು ಬೇಡ. ಆನ್‌ಲೈನ್ ಕ್ಲಾಸ್‌ಗಳು ಭೌತಿಕ ತರಗತಿಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು, ಬರಹ ಕಳೆದುಕೊಂಡು ಹಿಂದುಳಿದಿದ್ದಾರೆ. ಹೀಗಾಗಿ, ಭೌತಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ’ ಎಂದು ಸಚಿವರು ಹೇಳಿದರು.

‘ಶಾಲೆ, ಪಿಯು ಕಾಲೇಜುಗಳಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಬಂದರೂ ಎಲ್ಲ ಮಕ್ಕಳಿಗೆ ಪರೀಕ್ಷೆ ಮಾಡಿಸಬೇಕು. ಮಕ್ಕಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ನಿಯಮದಂತೆ ಭೌತಿಕ ತರಗತಿಗಳಿಗೆ ರಜೆ ಘೋಷಿಸಬೇಕು. ಮಕ್ಕಳು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು’ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist