ಬೆಂಗಳೂರು, (www.thenewzmirror.com):
ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು ಸೆಪ್ಟೆಂಬರ್‌ನಲ್ಲಿ ಒಟ್ಟು 15,576 ಟ್ರಿಪ್‌ಗಳನ್ನು ತಪಾಸಣೆ ನಡೆಸಿದ್ದು, ಈ ಸಂದರ್ಭದಲ್ಲಿ 2,209 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, 3.45 ಲಕ್ಷ ರೂ. ದಂಡ ವಸೂಲಿ ಮಾಡಿವೆ.
ಟಿಕೆಟ್ ಪಡೆಯದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಸಂಚಾರ ಮಾಡಿದ ಪ್ರಯಾಣಿಕರಿಂದ ಸೆಪ್ಟಂಬರ್ ತಿಂಗಳು ಒಂದರಲ್ಲೇ ಬರೋಬ್ಬರಿ 3,45,660 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಬಿಎಂಟಿಸಿ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್ ಪಡೆಯದೆ ಹಾಗೂ ಅನಧಿಕೃತವಾಗಿ ಪ್ರಯಾಣ ಮಾಡುವವರ ವಿರುದ್ಧ ತಪಾಸಣಾ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳುತ್ತಿದ್ದು ನಿರ್ವಾಹಕರ ವಿರುದ್ಧ 1,455 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು ಸೆಪ್ಟೆಂಬರ್ – 2021ರಲ್ಲಿ ಒಟ್ಟು 15,576 ಟ್ರಿಪ್‌ಗಳನ್ನು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 2,209 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 3,45,660/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1,455 ಪ್ರಕರಣಗಳನ್ನು ದಾಖಲಿಸಿರುತ್ತಾರೆ.
ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 189 ಪ್ರಯಾಣಿಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದ್ದು, ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದ್ದು ಒಟ್ಟು 18,900 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತಿಂಗಳೊಂದರಲ್ಲಿ 2,398 ಪ್ರಯಾಣಿಕರಿಂದ ಒಟ್ಟು ರೂ 3,64,560 ದಂಡ ವಸೂಲಿ ಮಾಡಲಾಗಿದೆ.