ಬೆಂಗಳೂರು,(www.thenewzmirror.com):ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ.ಡಿ ಶಿವಪ್ಪ ( 58) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತ್ತಿಗುಪ್ಪೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.., ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಶಿವಪ್ಪ 1995-2001ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಕಾರ್ಪೋರೇಟರ್ ಆಗಿದ್ರು. ಇತ್ತೀಚೆಗೆ ಬಿಜೆಪಿ ಸೇರಿದ್ದರು ಎಂದು ಅವ್ರ ಆಪ್ತರು ಮಾಹಿತಿ ನೀಡಿದ್ದಾರೆ.