ಮಂಗಳೂರಿಗೆ 3 ಸಾವಿರ ಕೋಟಿ ಅನುದಾನ

ಕೋವಿಡ್ ನಡುವೆಯೂ ಹಲವಾರು ಅಭಿವೃದ್ಧಿ  ಕಾಮಗಾರಿಗೆ ಚಾಲನೆ

ಮಂಗಳೂರು:
ಕೋವಿಡ್-19 ಸಂಕಷ್ಟದ ಮಧ್ಯೆಯೂ ಮಂಗಳೂರು ನಗರದ ಅಭಿವೃದ್ಧಿಗೆ ಸುಮಾರು ಮೂರು ಸಾವಿರ ರೂ. ಅನುದಾನ ತಂದಿದ್ದು, ಹಲವಾರು ಕಾಮಗಾರಿ  ಪ್ರಾರಂಭಗೊಂಡಿವೆ. ಇದರಿಂದ 2025ರ ವೇಳೆಗೆ ನಗರದ ಚಿತ್ರಣವೇ ಬದಲಾಗಲಿದೆ ಎಂದು ಶಾಸಕ ವೇದವ್ಯಾಸ ಡಿ.ಕಾಮತ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿದರು.
ಮೂರನೇ ಹಂತದ ಮೀನುಗಾರಿಕಾ ಜೆಟ್ಟಿ ಅಭಿವೃದ್ಧಿಗೆ 25 ಕೋಟಿ ರೂ., ಪಚ್ಚನಾಡಿ ಹಳೇ ತ್ಯಾಜ್ಯ ಗುಡ್ಡದ ವಿಲೇವಾರಿಗೆ 74 ಕೋಟಿ ರೂ. ಮೊತ್ತ ಮಂಜೂರಾತಿ ಸಿಕ್ಕಿದೆ. ಮಂಗಳೂರು ಹಾಗೂ ಆಸುಪಾಸಿನ ಗ್ರಾಮಸ್ಥರಿಗೆ ದಿನದ 24 ಗಂಟೆ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಜಲಸಿರಿ ಯೋಜನೆ ಕಾಮಗಾರಿ ನಡೆಯುತ್ತಿದೆ. 2025ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

RELATED POSTS


ಮೀನುಗಾರಿಕೆ ಅಭಿವೃದ್ಧಿಗೆ ಆರು ಕೋಟಿ ರೂ. ವೆಚ್ಚದಲ್ಲಿ ತೇಲುವ ಜೆಟ್ಟಿ, ನಗರದಲ್ಲಿ ಮಳೆಗಾಲದಲ್ಲಿ ಕೃತಕ ನೆರೆ ಉಂಟಾಗುವುದನ್ನು ತಡೆಗಟ್ಟಲು 35 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆಯ ಇಕ್ಕೆಲಗಳಲ್ಲೂ ಆವರಣ ಗೋಡೆ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕುದ್ರುಗಳಲ್ಲಿ ಫಿಲಂ ಸಿಟಿ ಸ್ಥಾಪನೆ ಪ್ರಸ್ತಾವನೆ ಇದೆ ಎಂದು ಅವರು ಹೇಳಿದರು.
ಹಿಂದಿನ ಶಾಸಕರ ಅವಧಿಯಲ್ಲಿ ಉರ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಶಿಲಾನ್ಯಾಸ ನಡೆದಿತ್ತು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಬಂದ 10 ಕೋಟಿ ರೂ. ಅನುದಾನ ಹಿಂದಕ್ಕೆ ಹೋಗಿತ್ತು. ಅದನ್ನು  ತರಿಸುವ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದರು.
400 ಕೋಟಿ ರೂ. ಎಡಿಬಿ ಸಾಲ ಯೋಜನೆಯ ಮೂಲಕ ನಗರದಲ್ಲಿನ ಹಳೇ ಯುಜಿಡಿ ವ್ಯವಸ್ಥೆ ಅಭಿವೃದ್ಧಿ ನಡೆಯುತ್ತಿದೆ. ಹಳೆ ಬಸ್ ನಿಲ್ದಾಣದ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆಗೆ ಟೆಂಡರ್, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 120 ಕೋಟಿ ರೂ. ಕಾಮಗಾರಿ ಟೆಂಡರ್ ಮುಗಿದಿದೆ. 11 ಅಂತಸ್ತುಗಳ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಪ್ರಕ್ರಿಯೆಗೆ ಕೋರ್ಟ್ ತಡೆಯಾಜ್ಞೆ ಅಡ್ಡಿಯಾಗಿದೆ. ವೆನ್ಲಾಕ್ ಆಸ್ಪತ್ರೆಗೆ 200 ವೆಂಟಿಲೇಟರ್ ಬೆಡ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist