ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು, (www.thenewzmirror.com) :

ಕಳೆದ ಹಲವು ದಿನಗಳಿಂದ ಚರ್ಚೆಗೆ ಕಾರಣವಾಗಿದ್ದ ಹಾಗೂ
ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರವಾಗಿದೆ.

RELATED POSTS

ಬೆಳಗಾವಿಯಲ್ಲಿ ನಡೆಯುತ್ತಿರೋ ಅಧಿವೇಶನದಲ್ಲಿ ಮಂಗಳವಾರ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿತ್ತು.

ವಿಪಕ್ಷಗಳ ವಿರೋಧದ ನಡುವೆಯೂ ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾದರು.

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಇಂದು ಇಡೀ ದಿನ ಚರ್ಚೆಗೆ ಅವಕಾಶ ನೀಡಲಾಗಿತ್ತು. ಕಾಯ್ದೆ ಕುರಿತಂತೆ ಪರ – ವಿರೋಧ ಚರ್ಚೆಗಳು ನಡೆದ್ವು. ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

ದೇಶದ 9 ನೇ ರಾಜ್ಯ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದ್ದು ಆ ಮೂಲಕ ಮಸೂದೆ ಅಂಗೀಕರಿಸಿದ ದೇಶದ 9ನೇ ರಾಜ್ಯ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈಗಾಗಲೇ ಅರುಣಾಚಲ ಪ್ರದೇಶ, ಗುಜರಾತ್, ಒಡಿಶಾ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಉತ್ತರಾಖಂಡ ರಾಜ್ಯಗಳು ಈ ಮಸೂದೆಯನ್ನು ಅಂಗೀಕರಿಸಿವೆ.

ಮತಾಂತರ ನಿಷೇಧ ಕಾಯಿದೆಯಲ್ಲಿಯಲ್ಲೇನಿದೆ..?

  • ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವುದಕ್ಕೆ ಅವಕಾಶವಿಲ್ಲ
  • ವ್ಯಕ್ತಿಯು ಆತನ ನಿಕಟಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ.
  • ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.
  • ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ.
  • ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.
  • ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.
  • ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.
  • ಮತಾಂತರದ ಉದ್ದೇಶದಿಂದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು ಏನೇನು….?

  • ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
  • ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
  • ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.
  • ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
  • ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ‌ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.
  • ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.
ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist