ಮನೆ ಬಾಗಿಲಿಗೆ ನಾಳೆ ಬರುತ್ತೆ ಬೆಸ್ಕಾಂ..!

ಬೆಂಗಳೂರು, (www.thenewzmirror.com) :

ಗ್ರಾಮೀಣ ಭಾಗದ ವಿದ್ಯುತ್‌ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು  ʼವಿದ್ಯುತ್‌ ಅದಾಲತ್‌ʼ  ಬೆಸ್ಕಾಂ ವ್ಯಾಪ್ತಿಯ̇ 8 ಜಿಲ್ಲೆಗಳ  104 ಹಳ್ಳಿಗಳಲ್ಲಿ ಶನಿವಾರ (ಜೂನ್‌ 18) ನಡೆಯಲಿದೆ.

RELATED POSTS

ಬೆಸ್ಕಾಂ ನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್‌ ಅದಾಲತ್‌ ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಜತೆಗೆ ಕಾಲಮಿತಿಯಲ್ಲಿ ವಿದ್ಯುತ್‌ ಸಮಸ್ಯಗಳಿಗೆ ಪರಿಹಾರವನ್ನೂ  ಒದಗಿಸಲಿದ್ದಾರೆ.

ಗ್ರಾಮೀಣ ಭಾಗದ ಜನರ ವಿದ್ಯುತ್‌ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎನ್ನುವ ಸದುದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್‌ ಅದಾಲತ್‌ ನಡೆಸಲು ಇಂಧನ, ಕನ್ನಡ ಮತ್ತು ಸಂಸ್ಕೃತಿ  ಸಚಿವ ವಿ. ಸುನಿಲ್‌ ಕುಮಾರ್‌ ಎಲ್ಲ ಎಸ್ಕಾಂಗಳಿಗೆ ಸೂಚಿಸಿದ್ದರು.

ವಿದ್ಯುತ್‌ ಸಂಬಂಧಿತ ಕುಂದು-ಕೊರತೆಗಳನ್ನು ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುವುದು ಅಥವ ನಿಗದಿತ ಕಾಲಮಿತಿಯೊಳಗೆ ನಿವಾರಿಸುವ ಉದ್ದೇಶದಿಂದ ಎಲ್ಲ ಎಸ್ಕಾಂಗಳಲ್ಲಿ ಅದಾಲತ್‌ ಏಕಕಾಲದಲ್ಲಿ ನಡೆಯಲಿದೆ.

ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಶನಿವಾರ ( ಜೂನ್‌ 18) ಅದಾಲತ್‌ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬೆಸ್ಕಾಂ ನ ಮುಖ್ಯ ಪ್ರಧಾನ ವ್ಯವಸ್ಥಾಪಕ (ಆಪರೇಷನ್ಸ್‌ ) ಎಂ.ಎಲ್. ನಾಗರಾಜು ತಿಳಿಸಿದ್ದಾರೆ.

ಗ್ರಾಹಕರು ದಿನನಿತ್ಯ ಎದುರಿಸುತ್ತಿರುವ ವಿದ್ಯುತ್‌ ಸಮಸ್ಯೆಗಳಾದ ವಿದ್ಯುತ್‌ ಪೂರೈಕೆಯಲ್ಲಿನ  ವ್ಯತ್ಯಯ, ಬಿಲ್ಲಿಂಗ್‌ ಇನ್ನಿತರ ಸಮಸ್ಯೆಗಳನ್ನು  ಅದಾಲತ್‌ ನಲ್ಲಿ ಆಲಿಸಿ ಪರಿಹಾರ ಸೂಚಿಲಾಗುವುದು ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ಹಳ್ಳಿಗಳ ವ್ಯಾಪ್ತಿಯ ಉಪ-ವಿಭಾಗಗಳಲ್ಲಿ ನಡೆಯುವ ವಿದ್ಯುತ್‌ ಅದಾಲತ್‌ ಗೆ ಹಾಜರಾಗುವ ಹಿರಿಯ ಅಧಿಕಾರಿಗಳು,ಆ ಹಳ್ಳಿಗೆ ಒದಗಿಸಿರುವ ವಿದ್ಯುತ್‌ ಪೂರೈಕೆ ಮೂಲಸೌಕರ್ಯಗಳು ಮತ್ತು ಆ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದು ಬೆಸ್ಕಾಂ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿದ್ಯುತ್‌ ಅದಾಲತ್‌ ಸಭೆಯಲ್ಲಿ, ವಿದ್ಯುತ್‌ ಸುರಕ್ಷತೆ, ವಿದ್ಯುತ್‌ ಕಳ್ಳತನ ತಡೆ, ಜನಸ್ನೇಹಿ ವಿದ್ಯುತ್‌ ಸೇವೆಗಳು, ಸೌರ ವಿದ್ಯುತ್‌, ವಾಟ್ಸ್‌ ಆಪ್‌ ಸಹಾಯವಾಣಿ ಮತ್ತು ಸರಕಾರದ ಇನ್ನಿತರ ಯೋಜನೆಗಳ ಕುರಿತು ಗ್ರಾಹಕರಿಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

ಆನ್‌ ಲೈನ್‌ ಜನಸ್ನೇಹಿ ವಿದ್ಯುತ್‌ ಸೇವೆಗಳ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಗ್ರಾಹಕರಿಗೆ ಅರಿವು ಮೂಡಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಈ ಅಭಿಯಾನವನ್ನು ಆದ್ಯತೆಯ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ ಪ್ರತಿ ಹಳ್ಳಿಗಳಿಗೆ ವಿಸ್ತರಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist