ಮಾರ್ಚ್ 1ರಿಂದ ಬಿಬಿಎಂಪಿ ಯಲ್ಲಿ ಸೇವೆಗಳು ಸಿಗೋದಿಲ್ಲ..!

ಬೆಂಗಳೂರು,(www.thenewzmirror.com):

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ‌ನೌಕರರು ಇದೇ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸೋಕೆ ಮುಂದಾಗಿದ್ದಾರೆ. ಈ ಕುರಿತಂತೆ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮಾಹಿತಿ ನೀಡಿದ್ದಾರೆ.

RELATED POSTS

ನ್ಯಾಯಾಯುತ ಬೇಡಿಕೆಗಳಾದ ವೇತನ-ಭತ್ಯೆಗೆ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಹಾಗೂ ಅಧಿಕಾರಿ/ನೌಕರರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಸೌಲಭ್ಯ/ಚಿಕಿತ್ಸೆ ಪಡೆಯಲು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಲು ಇಂದು ಬಿಬಿಎಂಪಿ ಮುಖ್ಯಾಯುಕ್ತ ತುಷಾರ್ ಗಿರಿನಾಥ್ ರವರಿಗೆ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು.

ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್


ಇದೇ ತಿಂಗಳ 21 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಎಲ್ಲಾ ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಒಮ್ಮತ ತೀರ್ಮಾನದಂತೆ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ದಿನಾಂಕ:01-03-2023ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವವುದು.

ಬಿಬಿಎಂಪಿ ಮುಖ್ಯಾಯುಕ್ತ ತುಷಾರ್ ಗಿರಿನಾಥ್

ಸರ್ಕಾರವು ಈಡೇರಿಸಬೇಕಾದ ಪ್ರಮುಖ ಬೇಡಿಕೆಗಳು:-

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40 ರಷ್ಟು ಫಿಟ್‌ಮೆಂಟ್‌ ಸೌಲಭ್ಯವನ್ನು ದಿನಾಂಕ:01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

ಹಲವಾರು ವರ್ಷಗಳಿಂದ ಮೇಲ್ಕಂಡ ಸಂಘದ ವತಿಯಿಂದ ನೀಡಿರುವ ಮನವಿ ಪತ್ರ ಹಾಗೂ ದಿನಾಂಕ:09-02-2023ರಂದು ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸದ ಇರುವ ಕಾರಣ ನಮ್ಮ ಸಂಘದ ವತಿಯಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಲು ಈ ಮೂಲಕ ಕೋರಲಾಗಿದೆ ಎಂದು ಎ.ಅಮೃತ್ ರಾಜ್ ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist