ಮಾರ್ಚ್ 16ರಿಂದ ಕತ್ತಲಲ್ಲಿ ಮುಳುಗಲಿದೆ ಇಡೀ ಕರ್ನಾಟಕ..?!

ಬೆಂಗಳೂರು, www.thenewzmirror.com) :

ವೇತನ ಪರಿಷ್ಕರಣೆ  ಮಾಡುವಂತೆ ಸರ್ಕಾರಕ್ಕೆ ಮನವಿ ಕೊಟ್ಟಿದ್ದರೂ ಸ್ಪಂದಿಸದ ಹಿನ್ನಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರು ಇದೀಗ ಮುಷ್ಕರಕ್ಕೆ ಮುಂದಾಗಿದ್ದಾರೆ. ಅದರ ಮುಂದುವರೆದ ಭಾಗವಾಗಿ ಮಾರ್ಚ್ 16 ರಿಂದ ಮುಷ್ಕರ ನಡೆಸೋದಾಗಿ ನೌಕರರ ಸಂಘದ ಅಧ್ಯಕ್ಷ H.R. ಲಕ್ಷ್ಮೀಪತಿ ತಿಳಿಸಿದ್ದಾರೆ.

RELATED POSTS

ಒಂದು ವೇಳೆ ನೌಕರರು ಮುಷ್ಕರ ನಡೆಸಿದ್ದೇ ಆದರೆ ಇಡೀ ಕರ್ನಾಟಕ ಕತ್ತಲಲ್ಲಿ ಮುಳುಗಿದರೂ ಅಚ್ಚರಿ ಪಡಬೇಕಿಲ್ಲ.

ಸಭೆಯಲ್ಲಿ ಕವಿಪ್ರನಿ ನೌಕರರು

ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿತ್ತು ಜತೆಗೆ ಮುಷ್ಕರದ ನೊಟೀಸ್ ಕೂಡ ನೀಡಲಾಗಿತ್ತು ಆದರೂ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಮುಷ್ಕರದ ಕುರಿತಂತೆ ಒಂದು ಒಕ್ಕೂಟದ ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್‌ ಜಾರಿ ಮಾಡಲಾಗಿತ್ತು. ನೋಟೀಸ್‌ ಜಾರಿ ಮಾಡಿ ಹತ್ತುದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್‌ 16, 2023 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಸೋಮವಾರದಿಂದಲೇ ಈ ಬಗ್ಗೆ ನಮ್ಮ ಎಲ್ಲಾ ನೌಕರರು ಮತ್ತು ಅಧಿಕಾರಿಗಳಿಗೆ ಮುಷ್ಕರದ ರೂಪು ರೇಷೆಗಳನ್ನು ತಿಳಿಸಿಕೊಡಲಿದ್ದೇವೆ. ಸಾರ್ವಜನಿಕರಿಗೆ ಆಗುವ ತೊಂದರೆಗೆ ಸರಕಾರವೇ ಹೊಣೆ. ಕೆಲಸಕ್ಕೆ ಗೈರು ಹಾಜರಾಗುತ್ತೇವೆ ಆ ಸಂಧರ್ಭದಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಕೆಇಬಿ ಇಂಜಿನಿಯರುಗಳ ಸಂಘದ ಅಧ್ಯಕ್ಷರು ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಕೆ. ಶಿವಣ್ಣ, ಕೆಇಬಿ ಎಸ್‌.ಸಿ/ಎಸ್‌.ಟಿ ನೌಕರರ ಕಲ್ಯಾಣ ಸಂಸ್ಥೆ ಅಧ್ಯಕ್ಷ ಕೆ.ದಾಸ್‌ ಪ್ರಕಾಶ್‌, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ ರಾಮಚಂದ್ರ ರೆಡ್ಡಿ, ಕವಿಪ್ರನಿನಿ ಡಿಪ್ಲಮೊ ಇಂಜಿನಿಯರುಗಳ ಸಂಘದ ಅಧ್ಯಕ್ಷ ಜೆ. ಲೋಕೇಶ್‌ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ನೌಕರರು ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist