ಬೆಂಗಳೂರು, (www.thenewzmirror.com):
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ತಗುಲಿದೆ. ಖುದ್ದು ಮುಖ್ಯಮಂತ್ರಿಗಳೇ ಟ್ವೀಟ್ ಮಾಡಿದ್ದು, ತಮಗೆ ಕೊವಿಡ್ ಸೊಂಕು ದೃಢಪಟ್ಟಿದೆ ಮತ್ತು ವೈರಸ್ ನ ಲಘು ಲಕ್ಷಣಗಳಿವೆ ಎಂದು ಹೇಳಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಪ್ರಸ್ತುತ ನಾನು ಹೋಮ್ ಕ್ವಾರಂಟೈನ್ ನಲ್ಲಿದ್ದು, ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡ ದಯವಿಟ್ಟು ಕೊವಿಡ್ ಪರೀಕ್ಷೆಗೆ ಒಳಗಾಗಿ ಎಂದು ಸಿಎಂ ಬೊಮ್ಮಾಯಿ ವಿನಂತಿ ಮಾಡಿದ್ದಾರೆ.
ಸಿಎಂ ಅವರಿಗೆ ಕೊವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಇಂದು ಮುಖ್ಯಮಂತ್ರಿಗಳು ರಾಜ್ಯದ ಆಡಳಿತ ಸುಧಾರಣೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿದ್ದರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ಹಾಗೂ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಉಪಸ್ಥಿತರಿದ್ದರು. ಇದಲ್ಲದೆ ಮುಖ್ಯಮಂತ್ರಿಗಳು ಖ್ಯಾತ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.