ಮೊದಲ ದಿನವೇ ಆರು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು:
ಪ್ರಧಾನಿ ಕಚೇರಿ ಮಾದರಿಯಲ್ಲಿ ಮುಖ್ಯಮಂತ್ರಿಯವರಿಗೆ ಡಿಜಿಟಲ್ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮಾಹಿತಿ ನೀಡುವ ಸಿ ಎಂ ಡ್ಯಾಷ್ ಬೋರ್ಡ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಪ್ರಧಾನಿ ಕಚೇರಿ ಮಾದರಿಯಲ್ಲಿ ಮುಖ್ಯಮಂತ್ರಿಯವರಿಗೆ ಡಿಜಿಟಲ್ ವೇದಿಕೆ

RELATED POSTS

ಮುಖ್ಯಮಂತ್ರಿಗಳಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿ ಇರುವ ಯೋಜನೆಗಳ ಸ್ಥಿತಿಗತಿ ಕುರಿತು ಸಿಎಂ ಡ್ಯಾಶ್ ಬೋರ್ಡ್ ಸಮಗ್ರ ಮಾಹಿತಿ ನೀಡಲಿದೆ. ವಿವಿಧ ಇಲಾಖೆಗಳ ಪ್ರಮುಖ ಯೋಜನೆಗಳ ಕುರಿತು ದಿನ ದಿನದ ಮಾಹಿತಿಯನ್ನು ಡ್ಯಾಶ್ ಬೋರ್ಡ್ ನಲ್ಲಿ ನಿಖರವಾಗಿ ದಾಖಲಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳು ಸರ್ಕಾರದ ಯೋಜನೆಗಳನ್ನು ಮತ್ತು ಅವುಗಳ ಸ್ಥಿತಿಯನ್ನು ಆನ್ ಲೈನ್ ಮೂಲಕ ಅರಿಯಲು ಡ್ಯಾಶ್ ಬೋರ್ಡ್ ಅನುಕೂಲ ಕಲ್ಪಿಸುತ್ತದೆ.‌ ಮುಖ್ಯಮಂತ್ರಿಯವರು ಡ್ಯಾಷ್ ಬೋರ್ಡ್ ಗೆ ಚಾಲನೆ ನೀಡಿ, ಕಂದಾಯ, ಬಿಬಿಎಂಪಿ, ಇಂಧನ, ಶಿಕ್ಷಣ, ವಸತಿ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಿವಿಧ ಇಲಾಖೆಗಳ ಪ್ರಮುಖ ಕಾರ್ಯಕ್ರಮಗಳ ಕುರಿತು ದಿನ ದಿನದ ಮಾಹಿತಿಯನ್ನು ಡ್ಯಾಷ್ ಬೋರ್ಡಿನಲ್ಲಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಮಾಹಿತಿ ದಾಖಲಿಸುವಲ್ಲಿ ಸ್ಪಷ್ಟತೆ, ನಿಖರತೆ ಇರಬೇಕು. ಯಾವುದೇ ಗೊಂದಲಕ್ಕೆಡೆಮಾಡಬಾರದು ಎಂದು ತಿಳಿಸಿದರು. ನೋಡಲ್ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಇಲಾಖಾ ಮುಖ್ಯಸ್ಥರು ಈ ಮಾಹಿತಿಯ ಕುರಿತು ವಿಶೇಷ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ರೂಪಿಸುವಷ್ಟೇ ಪ್ರಾಮುಖ್ಯತೆಯನ್ನು ಅನುಷ್ಠಾನಕ್ಕೆ ಸಹ ನೀಡಬೇಕು. ಹಿರಿಯ ಅಧಿಕಾರಿಗಳು ಆಸಕ್ತಿ ವಹಿಸದಿದ್ದರೆ ತಳ ಹಂತದ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಾರೆ. ಆದ್ದರಿಂದ ಇಲಾಖಾ ಮುಖ್ಯಸ್ಥರು ಕಾರ್ಯಕ್ರಮದ ಫಲಾನುಭವಿಗೆ ಸೌಲಭ್ಯ ತಲುಪಿಸುವ ವರೆಗೂ ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಯೋಜನೆಗಳ ಪರಿಣಾಮಕಾರಿ ಅನುಷ್ಠಾನವಾದಾಗ ಜನರಿಗೆ ಈ ವ್ಯವಸ್ಥೆ ನಮ್ಮದು, ನಮಗಾಗಿ ಸ್ಪಂದಿಸುವವರು ಇದ್ದಾರೆ ಎಂಬ ಭಾವನೆ ಬರುವುದು. ಈ ಭಾವ ಮೂಡಿಸಲು ನಾವು ಶ್ರಮಿಸಬೇಕು ಎಂದು ತಿಳಿಸಿದರು. ಇದೊಂದು ಉತ್ತಮ ಆರಂಭ. ಈ ಡ್ಯಾಷ್ ಬೋರ್ಡ್ ನಿಮ್ಮ ಇಲಾಖೆಯ ಕಾರ್ಯನಿರ್ವಹಣೆ ಕುರಿತು ನಿಮಗೂ ಕನ್ನಡಿ ಹಿಡಿಯುತ್ತದೆ. ಎಲ್ಲರೂ ಜೊತೆಯಾಗಿ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist