ಬೆಂಗಳೂರು/ ಚಂಡೀಗಢ ( www.thenewzmirror.com) :
ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ. ಪರಿಣಾಮ ಮೋದಿ ರ್ಯಾಲಿಯನ್ನ ರದ್ದು ಮಾಡಿ ವಾಪಾಸ್ ಆಗಿದ್ದಾರೆ.
ಬಟಿಂಡಾದಿಂದ ಹುಸೇನಿವಾಲಾ ಶಹೀದ್ ಸ್ಮಾರಕಕ್ಕೆ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಪ್ರಧಾನಿ ಮೋದಿ ಅವರ ಬೆಂಗಾವಲು ವಾಹನವು ಫ್ಲೈಓವರ್‌ನಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದ್ದರ ಪರಿಣಾಮ ಸುಮಾರು ಸುಮಾರು 20 ನಿಮಿಷಗಳ ಫ್ಲೈ ಓವರ್ ಮೇಲೆಯೇ ಸಿಲುಕಿಕೊಂಡಿದ್ದರು.
ಬಳಿಕ ಅವರ ಬೆಂಗಾವಲು ಪಡೆ ಅಲ್ಲಿಂದಲೇ ಹಿಂತಿರುಗಿದೆ. ಪ್ರಧಾನಿಯವರ ಈ ಅವಧಿಗೆ ಗೃಹ ವ್ಯವಹಾರಗಳ ಸಚಿವಾಲಯವು ಪಂಜಾಬ್ ಸರ್ಕಾರದಿಂದ ಉತ್ತರ ಕೇಳಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ.
ಪ್ರಧಾನಿ ಮೋದಿ ಇಂದು ಬೆಳಗ್ಗೆ ಬಟಿಂಡಾ ತಲುಪಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಿತ್ತು. ಮಳೆ ಮತ್ತು ಹವಾಮಾನ ವೈಪರೀತ್ಯ ಕಂಡು ಬಂದ ಹಿನ್ನಲೆಯಲ್ಲಿ ರಸ್ತೆಯ ಮೂಲಕ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು.
ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಡಿಜಿಪಿ ಖಚಿತಪಡಿಸಿದ ಬಳಿಕ ಪ್ರಧಾನಿ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಿದ್ದರು. ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಸುಮಾರು 30 ಕಿಮೀ ಮೊದಲು, ಪ್ರಧಾನಿ ಬೆಂಗಾವಲು ಮೇಲ್ಸೇತುವೆಯನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದರು. ಈ ವೇಳೆ ಪ್ರಧಾನಿಯವರು ಸುಮಾರು 15ರಿಂದ 20 ನಿಮಿಷಗಳ ಕಾಲ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡರು.
ಇದು ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ಕಂಡು ಬಂದ ದೊಡ್ಡ ಲೋಪವಾಗಿದೆ. ಪ್ರಧಾನಿಯವರ ಕಾರ್ಯಕ್ರಮ ಮತ್ತು ಪ್ರಯಾಣದ ಯೋಜನೆ ಬಗ್ಗೆ ಪಂಜಾಬ್ ಸರ್ಕಾರಕ್ಕೆ ಈಗಾಗಲೇ ಮಾಹಿತಿ ನೀಡಲಾಗಿತ್ತು ಎಂಬುದು ಗಮನಿಸಬೇಕಾದ ಸಂಗತಿ. ನಿಗದಿತ ವಿಧಾನದ ಪ್ರಕಾರ, ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಿದಾಗ, ಅವರು ಲಾಜಿಸ್ಟಿಕ್ಸ್, ಭದ್ರತೆ ಮತ್ತು ಆಕಸ್ಮಿಕ ಯೋಜನೆಯನ್ನು ಸಿದ್ಧಪಡಿಸುವ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ, ಆದರೆ ಪಂಜಾಬ್ ಪೊಲೀಸರು ಪ್ರಧಾನಿಯ ರಸ್ತೆ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ನಂತರವೂ ಪೊಲೀಸರು ಮಾಡಿದ್ದಾರೆ. ಭದ್ರತಾ ವ್ಯವಸ್ಥೆಗಳನ್ನು ಮಾಡಲಿಲ್ಲ.
ಇದು ಉದ್ದೇಶ ಪೂರಕವಾಗಿದೆಯೋ ಇಲ್ಲ ಅಜನಾಕ್ ಆಗಿದೆಯೋ ಅನ್ನೋದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.