ಬೆಂಗಳೂರು, (www.thenewzmirror.com) :
ಕೇಂದ್ರ ರಾಜ್ಯದ ಸಹಯೋಗದೊಂದಿಗೆ ಈ ವರ್ಷ 250 ಹಾಗೂ ಮುಂದಿನ ವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯಕ್ಕೆ ದೀರ್ಘಾವಧಿಯ ದೃಷ್ಟಿಕೋನದಿಂದ ಶಾಶ್ವತ ಆರೋಗ್ಯ ವಿಷನ್ ಡಾಕ್ಯುಮೆಂಟ್ ಅನ್ನು ರೂಪಿಸಲಾಗಿದ್ದು, ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಗುವುದು ಎಂದರು.