ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಸಲಹೆ ಅಗತ್ಯ: ಮುಖ್ಯಮಂತ್ರಿ

ಬೆಂಗಳೂರು:
ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಅನುಭವ, ಸಲಹೆ ಹಾಗೂ ಮಾರ್ಗದರ್ಶನದ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ ನನ್ನದೇ ಜವಾಬ್ದಾರಿಗಳಿವೆ. ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಕಟ್ಟಬೇಕು. ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ ನಮ್ಮ ಸರ್ಕಾರದ್ದು ಎಂದರು.

RELATED POSTS

ರಾಜ್ಯದ ಆರ್ಥಿಕತೆ ಬೆಳೆಯಲು ಎಲ್ಲಾ ಕ್ಷೇತ್ರದ ಜನ ಬೆಳೆದು, ಅಭಿವೃದ್ಧಿ ಹೊಂದಬೇಕು. ಜನರ ಶ್ರಮದಿಂದಲೇ ಆರ್ಥಿಕತೆ ನಿಜವಾಗಿಯೂ ಅಭಿವೃದ್ಧಿಯಾಗುವುದು ಎಂದು ಅವರು ಅಭಿಪ್ರಾಯಪಟ್ಟರು.

ಸೆಂಚುರಿ ಕ್ಲಬ್ ನಲ್ಲಿ ತಾವು ಕಳೆದ ಸಮಯವನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಸೆಂಚುರಿ ಕ್ಲಬ್ ಗೆ ತನ್ನದೇ ಸುದೀರ್ಘ ಇತಿಹಾಸವಿದೆ. ಸರ್ ಎಂ.ವಿಶ್ವೇಶ್ವರಯ್ಯ ಅವರಿದ್ದ ವ್ಯಕ್ತಿತ್ವ ಅಪರೂಪದ್ದು. ಅವರಿಂದ ಪ್ರಾರಂಭಗೊಂಡ ಈ ಕ್ಲಬ್ ಅತ್ಯಂತ ವೈಶಿಷ್ಟ್ಯಪೂರ್ಣ ಎಂದರಲ್ಲದೆ ಈ ಪರಂಪರೆಯನ್ನು ನಾವು ಮುಂದುವರಿಸಬೇಕು. ಬೆಂಗಳೂರು ಮಾತ್ರವಲ್ಲ ದೇಶದಲ್ಲಿಯೇ ಇದು ಅತ್ಯುತ್ತಮ ಕ್ಲಬ್ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist