ಬೆಂಗಳೂರು,(www.thenewzmirror.com):
ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವನಾಥ್ ಅವ್ರ ಹತ್ಯೆಗೆ ಕುರಿತಂತೆ ಕಾಂಗ್ರೆಸ್, ಬಿಜೆಪಿ ಮುಖಂಡರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿದೆ. ಎಸ್.ಆರ್. ವಿಶ್ವನಾಥ್ ಯಾವಾಗಲೂ ರೌಡಿಗಳನ್ನ ಇಟ್ಟುಕೊಂಡು ಓಡಾಟ ಮಾಡ್ತಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಇನ್ನು ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರೋ ವಿಶ್ವನಾಥ್, ನಾನು ರೌಡಿಗಳನ್ನಿಟ್ಟುಕೊಂಡು ಓಡಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಗಾದರೆ ಡಿ.ಕೆ.ಶಿವಕುಮಾರ್ ಅವರು ಸಾಧು ಸಂತರ ಜೊತೆಯಲ್ಲಿ ಓಡಾಡುತ್ತಿದ್ದಾರಾ? ಅಂತ ಪ್ರಶ್ನೆ ಮಾಡಿದ್ದಾರೆ.
ನನಗೆ ಡಿಕೆಶಿ ಅವ್ರ ಹಿನ್ನಲೆ ಏನು ಅನ್ನೋದು ಗೊತ್ತಿದೆ. ಅವರು ನನ್ನ ಉತ್ತಮ ಸ್ನೇಹಿತ, ಹತ್ಯೆ ಸಂಚಿನಂತಹ ಪ್ರಕರಣದಲ್ಲಿ ನನ್ನ ಪರವಾಗಿ ನಿಲ್ಲುವ ಬದಲು ಸಂಚು ರೂಪಿಸಿದವರ ಪರವಾಗಿ ಮಾತನಾಡಿರುವುದು ಸರಿಯಲ್ಲ ಅಂತ ಕಿಡಿಕಾರಿದ್ರು.
ಈ ಹಿಂದೆ ತಮ್ಮದೇ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಾಗಲೇ ಡಿ.ಕೆ.ಶಿವಕುಮಾರ್ ಅವರು ಶ್ರೀನಿವಾಸಮೂರ್ತಿ ಅವರ ಬೆಂಬಲಕ್ಕೆ ನಿಲ್ಲಲಿಲ್ಲ. ಇಂತಹ ಶಿವಕುಮಾರ್ ಅವರು ಈ ಪ್ರಕರಣದಲ್ಲಿ ನನ್ನ ಪರವಾಗಿ ನಿಲ್ಲುತ್ತಾರೆ ಎಂಬುದು ದೂರದ ಮಾತು ಎಂದರು.