ಬೆಂಗಳೂರು, (www.thenewzmirror.com) :
ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ಸುದ್ದಿಯಲ್ಲಿದ್ದ ವಕೀಲ ಜಗದೀಶ್ ಅವರನ್ನ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದು, ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಕೆ. ಎನ್. ಜಗದೀಶ್ ಮಹಾದೇವ್ ಸಹೋದ್ಯೋಗಿಗಳು, ಜಗದೀಶ್ ಪುತ್ರನ ಆರ್ಯನ್ ಜೊತೆ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ದಾಖಲೆಗಳನ್ನು ಸಲ್ಲಿಸಲು ಹೋಗುತ್ತಿದ್ದಾಗ ಆರ್ಯನ್ ಮೇಲೆ ಹಲ್ಲೆ ನಡೆದಿತ್ತು. ಇದನ್ನ ಜಗದೀಶ್ ಫೇಸ್ ಬುಕ್ ಲೈವ್ ನಲ್ಲಿ ನನ್ನ ಮಗ ಆರ್ಯನ್ ಮೇಲೆ 20 ಜನರು ಕೋರ್ಟ್ ಆವರಣದಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಹೇಳೋದಲ್ಲದೆ ದೂರು ಕೂಡ ನೀಡಿದ್ದರು. ಅಷ್ಟೇ ಅಲ್ದೇ ಆರ್ಯನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಫೇಸ್ ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದರು.
ಕೋರ್ಟ್ ಆವರಣದಲ್ಲಿ ಗಲಾಟೆ ನಡೆದ ಬಳಿಕ ವಕೀಲ ಜಗದೀಶ್ ಕೆಲ ವಕೀಲರ ಹೆಸರನ್ನ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದರ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಶನಿವಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್‌ಗೆ ದೂರ ನೀಡಿದ್ದರು.
ದೂರನಲ್ಲಿ ಕೋರ್ಟ್ ಆವರಣದಲ್ಲಿ ನಡೆದ ಗಲಾಡೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಪವಿತ್ರವಾದ ನ್ಯಾಯ ದೇವತೆಯ ಅಂಗಳದಲ್ಲಿ ಶಾಂತಿಯಿಂದ ಕಾರ್ಯ ನಿರ್ವಹಿಸಲು ವಕೀಲರಿಗೆ ಅವಕಾಶ ಮಾಡಿಕೊಡುವಂತೆ ಉಲ್ಲೇಖಿಸಿ ಮನವಿ ಮಾಡಿಕೊಂಡಿದ್ದರು.
ಇದರ ಬೆನ್ನಲ್ಲೇ ವಕೀಲ ಜಗದೀಶ್ ಅವರನ್ನ ಬಂಧಿಸಿದ್ದು ಹಲವು ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ.