ಬೆಂಗಳೂರು,(www.thenewzmirror.com);
ಕಳೆದ ಹಲವು ವರ್ಷಗಳಿಂದ ಸಂಕಷ್ಟದಲ್ಲಿ ಜೀವನ ಕಳೆಯುತ್ತಿದ್ದ ಸಾರಿಗೆ ನೌಕರರಿಹೆ ಗುಡ್ ನ್ಯೂಸ್ ಸಿಗುವ ಕಾಲ ಸನ್ನಿಹಿತವಾಗಿದೆ.
ಇದಕ್ಕೆ ಪೂರಕ ಎನ್ನುವಂತೆ ನಿವೃತ್ತ ಐ.ಎ.ಎಸ್.ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ಸಮಿತಿಯೊಂದಿಗೆ ನಡೆದ ಸಭೆ ಮಹತ್ವ ಪಡೆದುಕೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಿತಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕ.ರ.ಸಾ.ಸಂಸ್ಥೆ ಅಧ್ಯಕ್ಷ ಶಿವಯೋಗಿ ಕಳಸದ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ , ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ , ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.