ಬೆಂಗಳೂರು, (www.thenewzmirror.com) ;
ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಸಾರಿಗೆ ನೌಕರರು ನಾಳೆಯಿಂದ ಕರೆ ಕೊಟ್ಟಿದ್ದ ಮುಷ್ಕರಕ್ಕೆ ಹೈ ಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಮೂರು ವಾರಗಳ ಕಾಲ ಬ್ರೇಕ್ ಹಾಕುವಂತೆಯೂ ಸೂಚನೆ ಕೊಟ್ಟಿದೆ. ಇದರ ಜತೆಗೆ ಸರ್ಕಾರಕ್ಕೂ ನೊಟೀಸ್ ಜಾರಿ ಮಾಡಿದೆ.
ಸರ್ಕಾರಿ ನೌಕರರ ಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಹೆಚ್ ಎಂ ವೆಂಕಟೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ರು.


ಪಿಐಎಲ್ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್, ಈ ಆದೇಶ ನೀಡಿದೆ. ಪರೀಕ್ಷಾ ಸಮಯ ಆಗಿದ್ದರಿಂದ ಮುಷ್ಕರ ನಡೆಸಿದರೆ ಮಕ್ಕಳಿಗೆ ತೊಂದರೆ ಆಗುತ್ತೆ ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಮಾರ್ಚ್ 20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಅದರ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಹೀಗಾಗಿ ಏಪ್ರಿಲ್ 6ಕ್ಕೆ ಮುಂದಿನ ಸಭೆ ನಿಗದಿಪಡಿಸಲಾಗಿದೆ ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದರು. ಹೀಗಾಗಿ ಕೋರ್ಟ್ ಮುಷ್ಕರ ನಡೆಸದಂತೆ ತಾಕೀತು ಮಾಡಿ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.