ಬೆಂಗಳೂರು,(www.thenewzmirror.com);
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಲೆಯಲ್ಲಿ ಹಿಜಾಬ್ಗಿಲ್ಲ ಅವಕಾಶ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ.
ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.
ಹೈಕೋರ್ಟ್ ಕೇಳಿಕೊಂಡಿದ್ದ ಪ್ರಶ್ನೆಗಳು ,
1.ಹಿಜಾಬ್ ಧರಿಸುವುದು ಇಸ್ಲಾಂ ನಂಬಿಕೆ ಪ್ರಕಾರ ಇದು ಅತ್ಯಗತ್ಯ ಆಚರಯೇ.?
- ಸರ್ಕಾರದ ಆದೇಶ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯೇ.?
- ಸರ್ಕಾದ ಆದೇಶ ಆರ್ಟಿಕಲ್ 14 & 15ರ ಉಲ್ಲಂಘನೆಯೇ.?
- ಉಡುಪಿ ಕಾಲೇಜಿನ ಬಗ್ಗೆ ಶಿಸ್ತು ತನಿಖೆಯ ಅಗತ್ಯವಿದೇಯೇ.?
ಮೊದಲ ಪ್ರಶ್ನೆಗೆ ಉತ್ತರ – ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ.
ಎರಡನೇ ಪ್ರಶ್ನೆಗೆ ಉತ್ತರ – ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ದವಾಗಿದೆ.
ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ.