ಬೆಂಗಳೂರು,(www.thenewzmorror.com);
ದೆಹಲಿ ನಂತರ ಅತಿ ಹೆಚ್ಚು ಮಾಲಿನ್ಯ ನಗರಗಳ ಪಟ್ಟಿಗೆ ಬೆಂಗಳೂರು ಸೇರಿಕೊಂಡಿದೆ. ಈ ಹಣೆ ಪಟ್ಟಿಯಿಂದ ಆಚೆ ಬರುವ ನಿಟ್ಟಿನಲ್ಲಿ ಕಾರ್ಯಕ್ರವೃತ್ತರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನ ಇಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ವರ್ಷದ ಅಂತ್ಯದೊಳಗೆ ಬೆಂಗಳೂರಿಗೆ 1200 ಎಲೆಕ್ಟ್ರಿಕ್ ಬಸ್ ನೀಡಲು ಮುಂದಾಗಿದೆ. ಇದಕ್ಕಾಗಿ 500 ಕೋಟಿ ಹಣವನ್ನ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದರು.
ದೇಶಾದ್ಯಂತ 10 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲು ಮುಂದಾಗಿದೆ. ಎಲ್ಲಾ ರಾಜ್ಯಗಳಿಗೂ ಆದ್ಯತೆ ಮೇರೆಗೆ ನೀಡಲು ತೀರ್ಮಾನ ಮಾಡಲಿದೆ. 10 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿಗೆ ಅಗತ್ಯವಿರುವ ಸಂಪೂರ್ಣ ಅನುದಾನವನ್ನ ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ ನರೇಂದ್ರ ಮೋದಿ, 10 ಸಾವಿರ ಬಸ್ ಪೈಕಿ ಬೆಂಗಳೂರಿಗೆ 1200 ಬಸ್ ನೀಡುವ ಚಿಂತನೆ ಇದೆ ಎಂದು ತಿಳಿಸಿದರು.
ಆಮೂಲಕ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕೇಂದ್ರ ಮುನ್ನುಡಿ ಬರೆದಿದ್ದು, ಹಂತ ಹಂತವಾಗಿ ಸಿಟಿಯಲ್ಲಿ ಮಾಲಿನ್ಯದ ಪ್ರಮಾಣ ಕಡಿಮೆಯಾಗಲಿದೆ.