ಬೆಂಗಳೂರು,(www.thenewzmirror.com):
ಭಾರತಕ್ಕೆ ವಿಶ್ವ ಸುಂದರಿ ಪಟ್ಟ ಸಿಗೋದಕ್ಕೆ ಬರೋಬ್ಬರಿ 21 ವರ್ಷ ಕಾಯಬೇಕಾಯ್ತು.., ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಸಂಧು 70ನೇ ಮಿಸ್ ಯೂನಿವರ್ಸ್ ಪಟ್ಟ ಒಲಿಸಿಕೊಂಡಿದ್ದಾರೆ. 2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು.
ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ. ಮೆಕ್ಸಿಕೋ ದೇಶದ 2020ರ ಮಾಜಿ ವಿಶ್ವಸುಂದರಿ ಆಂಡ್ರಿಯಾ ಮೆಜಾ ಸಂಧು ಅವರಿಗೆ ಕಿರೀಟ ತೊಡಿಸಿದರು.
ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರು ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಇಂದಿನ ಮಹಿಳೆಯರು ಎದುರಿಸುತ್ತಿರುವ ಒತ್ತಡಗಳನ್ನು ಹೇಗೆ ನಿಭಾಯಿಸಬಹುದು ಎನ್ನುವುದನ್ನ ಸಂಧು, “ಇಂದಿನ ಯುವಜನತೆ ಎದುರಿಸುತ್ತಿರುವ ದೊಡ್ಡ ಒತ್ತಡವೆಂದರೆ ತಮ್ಮಲ್ಲಿ ನಂಬಿಕೆ ಇಡಬೇಕಾಗಿರುವುದು. ನೀವು ವಿಶಿಷ್ಠರು ಎಂದು ಭಾವಿಸಿಕೊಂಡರೆ ನಿಮ್ಮ ಬದುಕು ಸುಂದರವಾಗುತ್ತದೆ. ನಿಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ, ಪ್ರಪಂಚದಾದ್ಯಂತ ನಡೆಯುತ್ತಿರುವ ಹೆಚ್ಚು ಮುಖ್ಯವಾದ ವಿಷಯಗಳ ಬಗ್ಗೆ ಮಾತನಾಡೋಣ. ಮನೆಯಿಂದ ಆಚೆಬನ್ನಿ, ನಿಮ್ಮ ಬಗ್ಗೆ ಯೋಚನೆ ಮಾಡಿ, ನಿಮ್ಮ ಜೀವನಕ್ಕೆ ನೀವೇ ನಾಯಕರು, ನಿಮಗೆ ನೀವೇ ಧ್ವನಿಯಾಗಬೇಕು. ನಾನು ನನ್ನ ಮೇಲೆ ನಂಬಿಕೆ ಇಟ್ಟಿರುವುದರಿಂದ ಇಂದು ಇಲ್ಲಿ ನಿಂತಿದ್ದೇನೆ ಎಂದು ಆತ್ಮವಿಶ್ವಾಸದಿಂದ ನುಡಿದರು.