ಬೆಂಗಳೂರು, (www.thenewzmirror.com) :
ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ದಂಪತಿಗೆ ಎರಡನೇ ಗಂಡು ಮಗು ಆಗಿದೆ. ಈ ಕುರಿತಂತೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ವಿರುಷ್ಕಾ ದಂಪತಿಗೆ ಇದು ಎರಡನೇ ಮಗು ಆಗಿದ್ದು, ಆ ಮಗುವಿಗೆ ಅಕಾಯ್ ಎಂದು ಹೆಸರನ್ನೂ ಸಹ ಇಡಲಾಗಿದೆ.
ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಮಾಧ್ಯಮ ಇನ್ಟಾಗ್ರಾಂ ನಲ್ಲಿ ಈ ಕುರಿತಂತೆ ಪೋಸ್ಟ್ ಹಾಕಿಕೊಂಡಿದ್ದು ಸಂತಸ ಹಂಚಿಕೊಂಡಿದ್ದಾರೆ.

ಹೇರಳವಾದ ಸಂತೋಷ ಮತ್ತು ನಮ್ಮ ಹೃದಯದ ಪ್ರೀತಿಯಿಂದ, ಫೆಬ್ರವರಿ 15 ರಂದು, ನಮ್ಮ ಗಂಡು ಮಗು ಅಕಾಯ್ ಮತ್ತು ವಾಮಿಕಾ ಅವರ ಚಿಕ್ಕ ಸಹೋದರನನ್ನು ನಾವು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ನಾವು ಸಂತೋಷಪಡುತ್ತೇವೆ!” ಎಂದು Instagram ನಲ್ಲಿ ಬರೆದುಕೊಂಡಿದ್ದಾರೆ.
“ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ನಾವು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ದಯೆಯಿಂದ ಗೌರವಿಸುವಂತೆ ನಾವು ವಿನಂತಿಸುತ್ತೇವೆ. ಪ್ರೀತಿ ಮತ್ತು ಕೃತಜ್ಞತೆ. ವಿರಾಟ್ ಮತ್ತು ಅನುಷ್ಕಾ ಎಂದು ಬರೆದಿದ್ದಾರೆ.