ಬೆಂಗಳೂರು, (www.thenewzmirror.com) ;
70 ನೇ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಪ್ರಕಟವಾಗಿದ್ದು, ‘ಕಾಂತಾರ’ ಸಿನಿಮಾಗಾಗಿರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಕೆಜಿಎಫ್ 2ಗೆ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಸಾಹಸ ವಿಭಾಗದಲ್ಲೂ ಕೆಜಿಎಫ್ 2ಗೆ ಪ್ರಶಸ್ತಿ ಸಿಕ್ಕಿದ್ದು, ಅತ್ಯುತ್ತಮ ಮನರಂಜನಾ ಪ್ರಶಸ್ತಿ ಕೂಡ ಕಾಂತಾರ ಪಡೆದುಕೊಂಡಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2024 ವಿಜೇತ ಪಟ್ಟಿಯನ್ನ ಪ್ರಕಟ ಮಾಡಿದೆ. ಮಮ್ಮುಟ್ಟಿ ಮತ್ತು ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ರು ಅಂತಿಮವಾಗಿ ರಿಷಬ್ ಶೆಟ್ಟಿಗೆ ಪ್ರಶಸ್ತಿ ಒಲಿದು ಬಂದಿದೆ.
2022ರಲ್ಲಿ ತೆರೆಕಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ʼಕಾಂತಾರʼ ಚಿತ್ರ ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನವಾಗಿತ್ತು. ಅತ್ಯುತ್ತಮ ಚಿತ್ರದ ಜತೆಗೆ ನಟ, ನಿರ್ದೇಶಕ ವಿಭಾಗದಲ್ಲಿಯೂ ರಿಷಬ್ ಶೆಟ್ಟಿ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ತುಳುನಾಡಿನ ವಿಶಿಷ್ಟ ಭೂತಾರಾಧನೆಯ ಸಂಸ್ಕೃತಿಯನ್ನು ಜಗತ್ತಿಗೇ ಸಾರಿದ ಈ ಸಿನಿಮಾ ಮೇಕಿಂಗ್‌ನಿಂದಲೇ ಪ್ರೇಕ್ಷಕರ ಗಮನ ಸೆಳೆದಿತ್ತು. ಅದರಲ್ಲಿಯೂ ನಾಯಕನಾಗಿ ರಿಷಭ್ ಶೆಟ್ಟಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಕ್ಲೈಮಾಕ್ಸ್‌ನಲ್ಲಂತೂ ಅವರ ಅಭಿನಯ ಅಮೋಘ ಎಂದಿದ್ದ ಹಲವರು ಅಂದೇ ನ್ಯಾಷನಲ್ ಅವಾರ್ಡ್ ಬಗ್ಗೆ ಭವಿಷ್ಯ ನುಡಿದಿದ್ದರು.