ಬೆಂಗಳೂರು(www.thenewzmirror.com):ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ, ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ? ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಜಾತ್ಯಾತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎನ್ನುವುದು ನಿಜ ಆದರೆ ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸoವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.
ಹುಲಿಗಳ ಸಾವು,ತಪ್ಪಿತಸ್ಥರ ವಿರುದ್ಧ ಕ್ರಮ:
ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.