ಮೈಸೂರು(www.thenewzmirror.com): ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ.ಹೇಳಿಕೆ ಮಾತು ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ,ಯಾರೂ ಏನೂ ಹೇಳಿದರು ನಮ್ಮ ಸರ್ಕಾರ ಅವದಿ ಪೂರ್ಣಗೊಳಿಸಲಿದೆ ಎಂದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.