ಬೆಂಗಳೂರು, (www.thenewzmirror.com);
ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಸಬೇಕು ಅಂತ ಜುಲೈ 7 ರಂದು ಇಡೀ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಬೃಹತದ ಮುಷ್ಕರ ನಡೆಸಿದ್ರೆ, ಜುಲೈ 8 ರಂದು ಬೆಂಗಳೂರು ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಈ ಕುರಿತಂತೆ ರಾಜ್ಯದ ಮಹಾನಗರ ಪಾಲಿಕೆ ನೌಕರರ ರಾಜ್ಯಾಧ್ಯಕ್ಷ ಹಾಗೂ ಬಿಬಿಎಂಪಿ ನೌಕರರ ಹಾಗೂ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಮಾಹಿತಿ ನೀಡಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ನೌಕರರು ವಿವಿಧ ಬೇಡಿಕೆಗಳ ಅಗ್ರಹಿಸಿ ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ತುಮಕೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಮಾಹಿತಿ ನೀಡಿದರು.
ಜುಲೈ 7 ರಂದು ರಾಜ್ಯದ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರು ಭಾಗವಹಿಸಲಿದ್ದು ಅಂದು ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ತಿಳಿಸಿದ ಅವರು, ನಮ್ಮ ಬೇಡಿಕೆಗಳನ್ನ ಈಡೇರಿಸಿ ಎಂದು ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆಗೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಡಿಕೆಗೆ ಸಕರಾತ್ಮಕವಾಗಿ ಸ್ಪಂದಿಸದ ಹಿನ್ನಲೆಯಲ್ಲಿ ಜುಲೈ 7ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ರಾಜ್ಯ ಮಹಾನಗರ ಪಾಲಿಕೆ ನೌಕರರ ಬೇಡಿಕೆಗಳು
– ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಜಾರಿ ಮಾಡಬೇಕು
– ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.
– ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
– ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು
– ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.
– ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು
ಬಿಬಿಎಂಪಿ ನೌಕರರು ಮತ್ತು ಅಧಿಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಬೇಡಿಕೆಗಳು
– Logsafe ಹಾಜರಾತಿ ಪದ್ಧತಿ ಕಡ್ಡಾಯ ಮಾಡಬೇಕು
– 225 ವಾರ್ಡ್ ಗಳಲ್ಲಿ ಖಾಲಿ ಇರುವ 6000 ಕ್ಕೂ ಅಧಿಕ ಖಾಲಿ ಹುದ್ದೆ ಭರ್ತಿ ಮಾಡಬೇಕು
– ಬಿಬಿಎಂಪಿ ವಿದ್ಯಾ ಇಲಾಖೆ ಅಧಿಕಾರಿ, ಪ್ರಾಂಶುಪಾಲರ ಮೇಲಿರೋ ಕಾನೂನು ಬಾಹಿರ ಇಲಾಖಾ ವಿಚಾರಣೆ ಕೈ ಬಿಡಬೇಕು
– ವಿಶೇಷ ಆಯುಕ್ತರು (ಆಡಳಿತ) ವಲಯಕ್ಕೆ ನೇಮಿಸದೇ ವಿಶೇಷ ಆಯುಕ್ತರು(ಆಡಳಿತ) ಹುದ್ದೆಗೆ ಮಾತ್ರ ನಿಯೋಜಿಸುವುದು
– ಪಾಲಿಕೆಯಲ್ಲಿರುವ ಇಂಜಿನಿಯರ್ ಗಳಿಗೆ ಸೇವಾ ಹಿರಿತನದ ಆಧಾರದ ಮೇಲೆ ಮುಂ ಬಡ್ತಿ ನೀಡಬೇಕು
– ಇ ಆಸ್ತಿ ಪದ್ದತಿಯನ್ನು ನಿಯಮಾನುಸಾರ ಹಿಂದೆ ಇದ್ದ ಪದ್ದತಿಯಲ್ಲಿಯೇ ಮುಂದುವರೆಸಬೇಕು
– ಎರವಲು ಸೇವೆಯಲ್ಲಿರೋ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವರ್ಗಾವಣೆ ಮಾಡಬೇಕು
– ಎಲ್ಲ ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡಬೇಕು
– ಸರ್ಕಾರಿ ನೌಕರರಿಗೆ ಇರುವಂತೆ ಮಹಾನಗರ ಪಾಲಿಕೆ ನೌಕರರಿಗೆ/ ಅಧಿಕಾರಿಗಳಿಗೂ ಆರೋಗ್ಯವಿಮೆ/ಯೋಜನೆ ಜಾರಿ ಮಾಡಬೇಕು
– ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರೋ ಎಲ್ಲಾ ಅಧಿಕಾರಿ/ನೌಕರರಿಗೆ ಸೇವಾ ಜೇಷ್ಠತಾ ಪಟ್ಟಿ ಪ್ರಕಟಿಸಬೇಕು
– ಆರೋಗ್ಯ ಇಲಾಖೆಯಲ್ಲಿರೋ ಹೆಲ್ತ್ ಸೂಪರ್ ವೈಸರ್ ಗಳು ಬಿ ಶ್ರೇಣಿ ಅಧಿಕಾರಿಗಳಾಗಿದ್ದು, ಉದ್ದಿಮೆ ಪರಾವನಗಿಯ(user id and password) ನೀಡುವುದು
– ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿರೋ ಮಾರ್ಷಲ್ ಹುದ್ದೆಗಳನ್ನ ಕೂಡಲೇ ರದ್ದು ಮಾಡುವುದು