ಹಾಲಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ರಚನೆ,ಮುಂದೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್

RELATED POSTS

ಬೆಂಗಳೂರು(www.thenewzmirror.com):ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುತ್ತದೆ,“ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಡಿಸಿಎಂ,

“ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ಸಚಿವ ಪರಮೇಶ್ವರ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಎತ್ತಿನಹೊಳೆ ವಿಚಾರವಾಗಿ ಕೆಲವು ಸಮಸ್ಯೆ ಇತ್ತು. ಅವರ ತಾಲೂಕನ್ನು ಕೈಬಿಡಬೇಕು ಎಂಬ ಪ್ರಸ್ತಾವನೆ ಇತ್ತು. ಈ ಭಾಗದಲ್ಲಿ ನೀರು ನಿಲ್ಲಿಸಬೇಕಾಗಿದ್ದು, ಯಾವುದೇ ಹಳ್ಳಿ ಮುಳುಗದಂತೆ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಸ್ಥಳೀಯರೇ ಒಂದೆರಡು ಕೆರೆಗಳ ಬಗ್ಗೆ ಸಲಹೆ ನೀಡಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು” ಎಂದು ತಿಳಿಸಿದರು.

ನಾಳೆ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಹಾಗೂ ಹಾಸನ ಭಾಗದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಅನುಮತಿ ಬಗ್ಗೆ ಚರ್ಚಿಸಲು ಸಮಯಾವಕಾಶ ನಿಗದಿಯಾಗಿದೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಲಾಗುವುದು” ಎಂದು ತಿಳಿಸಿದರು.

ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ ದೆಹಲಿಗೆ ಭೇಟಿ ನೀಡಿದಾಗ ಅಲ್ಲಿಗೆ ಹೋಗಿ ಕೈಮುಗಿದು ಬರುತ್ತೇವೆ” ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist