ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ:500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

RELATED POSTS

ಬೆಂಗಳೂರು(www.thenewzmirror.com): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶಕ್ತಿ 500ನೇ ಕೋಟಿ ಪಿಂಕ್ ಟಿಕೆಟ್ ವಿತರಿಸಿದರು, ಬಸ್ಸಿನಲ್ಲಿದ್ದ  ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿ 30 ಮಹಿಳಾ ಪ್ರಯಾಣಿಕರಿಗೆ  ಇಳಕಲ್ ಸೀರೆ ನೀಡಿ ಗೌರವಿಸಿದರು. ‌500 ನೇ ಕೋಟಿ ಶಕ್ತಿ‌ ಟಿಕೇಟ್ ಪಡೆದ ಮಹಿಳೆಗೆ  ಮುಖ್ಯಮಂತ್ರಿಗಳು ಶಾಲು ಹೊದಿಸಿ, ಹಾರ ಹಾಕಿ ,ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ನಂತರ ಒಡಲ ಧ್ವನಿ ಸ್ತ್ರೀ ಸಂಘ ವಿಜಯಪುರವರು ಶಕ್ತಿ ಯೋಜನೆಯಿಂದ ಸಾವಯವ ರೊಟ್ಟಿ, ,ಹೋಳಿಗೆ ತಯಾರಿಸಿ ಬೆಂಗಳೂರಿಗೆ ಮಾರಾಟ‌‌ ಮಾಡಿ ಲಕ್ಷಾಂತರ ರೂ ವಹಿವಾಟು ನಡೆಸಲಾಗಿದ್ದು ,ಅವರಿಂದ ಮುಖ್ಯಮಂತ್ರಿ ರವರಿಗೆ ಮತ್ತು ಉಪಮುಖ್ಯ ಮಂತ್ರಿರವರಿಗೆ, ಸಾರಿಗೆ ಹಾಗೂ‌ ಮುಜರಾಯಿ ಸಚಿವರಿಗೆ ರೊಟ್ಟಿ ನೀಡಿ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ  ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ವಿವರಿಸಿದರು.

ವಿಶೇಷ ಬಸ್ ಪೂಜಾ ಕಾರ್ಯಕ್ರಮ:

ನಗರದ ಪ್ರಮುಖ ಬಸ್ ನಿಲ್ದಾಣಗಳಲ್ಲಿ, ತಾಲ್ಲೂಕು ಮತ್ತು ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಬಸ್‌ ಪೂಜೆ ನೆರವೇರಿಸಿ ಸಿಹಿ‌ ಹಂಚಿ ಸಾಂಕೇತಿಕವಾಗಿ ಅಚರಣೆ ಮಾಡಿ, ಮಹಿಳಾ ಪ್ರಯಾಣಿಕರಿಗೆ ಬಸ್‌ನಲ್ಲಿ ಸ್ವಾಗತದ ರೂಪದಲ್ಲಿ ಗುಲಾಬಿ ಹೂಗಳ ವಿತರಣೆ ಮಾಡಲಾಯಿತು.

ಶಕ್ತಿ ಪ್ರಗತಿ:

ಕರ್ನಾಟಕ‌ ಸರ್ಕಾರದ‌ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಿದೆ.ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ‌ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ  ಸಾಕ್ಷಿಯಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ  ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ. ನಗರ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ರಾಜ್ಯದ್ಯಾಂತ ರಾಜ್ಯದ ನಿವಾಸಿಗಳಾ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಶಕ್ತಿ ಯೋಜನೆಗೆ ಮುನ್ನ ಸಾರಿಗೆ ಬಸ್ಸುಗಳಲ್ಲಿ ಪ್ರತಿ ದಿನ 85.84 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು, ಈಗ 1.17  ಕೋಟಿ ಜನರು‌ ಪ್ರತಿ ದಿನ ಪ್ರಯಾಣಿಸುತ್ತಿದ್ದಾರೆ.ಸಾರಿಗೆ ನಿಗಮಗಳನ್ನು ಸದೃಡಗೊಳಿಸಲು,ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಗೆ ಚಾಲನೆ ನೀಡಲಾಗಿದೆ.

ಹೊಸ ಬಸ್ಸುಗಳ ಸೇರ್ಪಡೆ‌ ಮತ್ತು ನೇಮಕಾತಿಯು ಸಂಪೂರ್ಣ ಸ್ಥಗಿತಗೊಂಡಿತ್ತು.ಕಳೆದ ಎರಡು ವರುಷದಲ್ಲಿ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿತು. ಈಗಾಗಲೇ ನಾಲ್ಕು ನಿಗಮಗಳಲ್ಲಿ 5049 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.ಅದೇ ರೀತಿ 9000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. ಈಗಾಗಲೇ 6700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಒಟ್ಟು 10000 ನೇಮಕಾತಿ ಸಾರಿಗೆ ನಿಗಮದಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಚಾಲನೆ ದೊರಕಿದೆ.

ಶಕ್ತಿ‌ ಫೂರ್ವ 21164 ಅನುಸೂಚಿಗಳಿದ್ದು, ,ಶಕ್ತಿ‌ ನಂತರ 23635 ಕ್ಕೆ ಹೆಚ್ಚಳವಾಗಿದೆ. ಅದೇ ರೀತಿ ಶಕ್ತಿ‌ ಪೂರ್ವ ಒಟ್ಟು ಬಸ್ಸುಗಳು 23948 ಇದ್ದದ್ದು‌ ನಂತರ 26130 ಕ್ಕೆ ಏರಿಕೆಯಾಗಿದೆ. ಹಳೆಯ 2828 ವಾಹನಗಳನ್ನು ಬದಲಿಸಲಾಗಿದೆ.ಕಳೆದ ಎರಡು ವರ್ಷದಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ 185 ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಸಾರಿಗೆ ನಿಗಮಗಳಿಗೆ ಲಭಿಸಿರುತ್ತದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist