ಗ್ಯಾರಂಟಿಗಳಿಂದ ಜನತೆಯ ಕೊಳ್ಳುವ ಶಕ್ತಿ ಹೆಚ್ಚಾಗಿದೆ: ಸಿ.ಎಂ

RELATED POSTS

ಅರಸೀಕೆರೆ (www.thenewzmirror.com):ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದಾಗಿ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ, ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ ಎಂದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ‌ ಸಿಎಂ, ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಆದರೆ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು.

ರಾಹುಲ್ ಗಾಂಧಿಯವರಿಗೆ ಒಬಿಸಿ ಸಮುದಾಯಗಳು ಅರ್ಥವಾಗಿವೆ:

ದೆಹಲಿಯಲ್ಲಿ ನಡೆದ ಹಿಂದುಳಿದ ಸಮುದಾಯಗಳ ಸಮ್ಮೇಳನದಲ್ಲಿ ರಾಹುಲ್ ಗಾಂಧಿಯವರು “ಹಿಂದುಳಿದ ಸಮುದಾಯಗಳ ಬಗ್ಗೆ ತಮ್ಮ ಗ್ರಹಿಕೆಯನ್ನು ಸ್ಪಷ್ಟಪಡಿಸಿದ್ದಾರೆ”. ಹಿಂದುಳಿದ ವರ್ಗಗಳು, ಮಹಿಳೆಯರು, ದಲಿತರು, ಶೋಷಿತರು, ಎಲ್ಲಾ ಜಾತಿಯ ಬಡವರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿದೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ಮತ್ತು ಬಡವರ ಪ್ರಗತಿಗಾಗಿ , ಸಂವಿಧಾನದ ಮೌಲ್ಯಗಳ ಈಡೇರಿಕೆಗಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಏಕೈಕ ಪಕ್ಷ. ದೇಶದಲ್ಲಿ, ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿ ಮಾಡಿರುವುದು ಕಾಂಗ್ರೆಸ್ ಮಾತ್ರ. ಚರಿತ್ರೆ ನೋಡಿ ಎಂದು ಬಿಜೆಪಿಗೆ ಸವಾಲು ಹಾಕಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist