ಬಿಜೆಪಿಯ ಮೂಲ ಕಾರ್ಯಕರ್ತರಿಂದಲೇ ಧರ್ಮಸ್ಥಳ ಪ್ರಕರಣದ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

RELATED POSTS

ಬೆಂಗಳೂರು(www.thenewzmirror.com): ಬಿಜೆಪಿಯ ಧರ್ಮಸ್ಥಳ ಚಲೋಗೆ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,“ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ತಿರುಗೇಟು ನೀಡಿದರು. 

ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist