ಹಾಸನ ಗಣೇಶ ವಿಸರ್ಜನಾ ಮೆರವಣಿಗೆ ದುರ್ಘಟನೆಗೆ ಸಿಎಂ ವಿಷಾಧ: ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ

RELATED POSTS

ಬೆಂಗಳೂರು(www.thenewzmirror.com):ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣೆ ವೇಳೆ ನಡೆದ ದುರ್ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಕರೆ ನೀಡಿದ್ದಾರೆ‌

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist