ನ.17 ರಂದು ಬಸವನಗುಡಿ ಕಡಲೆಕಾಯಿ ಪರಿಷೆ ಉದ್ಘಾಟನೆ: ಮೊದಲ ಬಾರಿ ಐದು ದಿನ ಪರಿಷೆ ನಡೆಸಲು ರಾಮಲಿಂಗಾರೆಡ್ಡಿ ನೇತೃತ್ವದ ಸಭೆಯಲ್ಲಿ ನಿರ್ಧಾರ

RELATED POSTS

ಬೆಂಗಳೂರು(www.thenewzmirror.com): ಬೆಂಗಳೂರಿನ ಇತಿಹಾಸ ಪ್ರಸಿದ್ಧ ಬಸನಗುಡಿಯ ಕಡಲೆಕಾಯಿ ಪರಿಷೆಯನ್ನು ಈ ಬಾರಿ ಐದು ದಿನಗಳ ಕಾಲ ನಡೆಸುವ ನಿರ್ಧಾರವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ,ಅಧ್ಯಕ್ಷತೆಯಲ್ಲಿ ನಡೆದ ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆಯಲ್ಲಿ ಕೈಗೊಳ್ಳಲಾಯಿತು.

ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿದ್ದು, ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು ಹಾಗಾಗಿ ಈ ಬಾರಿ ಇನ್ನಷ್ಟು ಉತ್ತೇಜನದಿಂದಿಗೆ ಪರಿಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆಯೊಂದಿಗೆ ವಿಜೃಂಭಣೆಯಿಂದ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಯಿತು.

ಪ್ರಸಕ್ತ ವರ್ಷ ದಿನಾಂಕ:17.11.2025 ರಿಂದ ಪ್ರಾರಂಭವಾಗುವ ಐತಿಹಾಸಿಕ ಪ್ರಸಿದ್ಧ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ,  ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ‌‌ ತೀರ್ಮಾನಿಸಲಾಯಿತು.

ಸಭೆಯ ಪ್ರಮುಖ ಅಂಶಗಳು:

✅ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ದಿನಾಂಕ:17.11.2025 ರಂದು ಸೋಮವಾರ ಬೆಳಗ್ಗೆ 10.00 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆಯ ಸಮಾರಂಭಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳ ಹಾಗೂ ಮಾನ್ಯ ಉಪ ಮುಖ್ಯ ಮಂತ್ರಿಗಳಿಗೆ ಆಹ್ವಾನ.

✅ ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವುದು.

✅ ವಿಜೃಂಭಣೆಯ  ದೀಪಾಲಂಕಾರ ವ್ಯವಸ್ಥೆ ಮತ್ತು ಈ ವರ್ಷ 05 ದಿನಗಳಿಗೆ  ಹಾಗೂ ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ಸೇರಿ ದೀಪಾಂಲಕಾರ ವಿಸ್ತರಿಸಲು ತೀರ್ಮಾನ

✅ಎನ್ ಜಿ ಓ ಗಳ ಸಹಕಾರದೊಂದಿಗೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸದಂತೆ ಬಟ್ಟೆ ಬ್ಯಾಗ್ ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು *ಪರಿಷೆಗೆ ಬನ್ನಿ ಕೈ ಚೀಲ ತನ್ನಿ*’ ಎಂದು ಘೋಷಣೆ ಹಾಗೂ ಪ್ಲಾಸ್ಟಿಕ್ ಸಂಪೂರ್ಣ ನಿಷೇದಿಸಲು ಕ್ರಮ 

✅ ಸುಂಕ ವಸೂಲಾತಿ ರದ್ದು ಈ‌ ವರ್ಷವೂ ಮುಂದುವರಿಕೆ:

 ಬುಲ್ ಟೆಂಪಲ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್ ಮಾಡಲಾಗುತ್ತಿದ್ದು, ಟೆಂಡರ್ ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕವನ್ನು ವಸೂಲಿ ಮಾಡುತ್ತಿರುವುದಾಗಿ ಕಳೆದ ವರ್ಷ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್ ಅನ್ನು ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ  ತೀರ್ಮಾನ

✅ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ‌ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ

✅ನಿರಂತರ ವಿದ್ಯುತ್,

ಕುಡಿಯುವ ನೀರಿನ ವ್ಯವಸ್ಥೆ,

 ಸಾರ್ವಜನಿಕ ಶೌಚಾಲಯದ ವ್ಯವಸ್ಥೆ

✅ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ,‌ ಅಗ್ನಿ ಶಾಮಕ ವಾಹನ ನಿಯೋಜನೆ.

ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist