ಹತ್ತು ಲಕ್ಷ ಬಹುಮಾನ,ಸರ್ಕಾರಿ ಉದ್ಯೋಗ:ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡದ ರಾಜ್ಯದ ಆಟಗಾರರಿಗೆ ಸರ್ಕಾರದ ಗಿಫ್ಟ್

RELATED POSTS

ಬೆಂಗಳೂರು(www.thenewzmirror.com): ಒಲಂಪಿಕ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ನಗದು ಬಹುಮಾನ ಘೋಷಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿರುವ ರಾಜ್ಯ ಸರ್ಕಾರ ಇದೀಗ ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದಲ್ಲಿನ  ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದರು. ಬಳಿಕ  ಮಾತನಾಡಿದ ಅವರು,ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದರು.ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. 

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಅದರಂತೆ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. 

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ  ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್  ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist