ಹಿಂದಿ ಕಲಿಯಲು ವಿರೋಧವಿಲ್ಲ, ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಲ್ಲ: ಸಿಎಂ ಸಿದ್ದರಾಮಯ್ಯ 

RELATED POSTS

ಮೈಸೂರು(www.thenewzmirror.com): ರಾಜ್ಯದಲ್ಲಿ’ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು ಮೊದಲ ಹಂತವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿ ಅಂಕಗಳನ್ನು ಪರಿಗಣಿಸದಿರಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ.”ದ್ವಿಭಾಷಾ ನೀತಿಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೊದಲು ಇದ್ದ 625 ಒಟ್ಟು ಅಂಕಗಳನ್ನು ಈಗ 525ಕ್ಕೆ ನಿಗದಿಪಡಿಸಲಾಗಿದೆ. ನಾವು ಹಿಂದಿ ಭಾಷೆ ಕಲಿಯುವುದನ್ನು ವಿರೋಧಿಸುತ್ತಿಲ್ಲ, ಆದರೆ ಪರೀಕ್ಷೆಯ ಅಂಕಗಳ ಲೆಕ್ಕಾಚಾರಕ್ಕೆ ಅದನ್ನು ಕಡ್ಡಾಯಗೊಳಿಸುವುದು ಬೇಡ ಎಂಬುದು ಸರ್ಕಾರದ ನಿಲುವು,” ಎಂದರು. ಖಾಸಗಿ ಶಾಲೆಗಳ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸರ್ಕಾರಿ ತೀರ್ಮಾನಕ್ಕೆ ಪರ-ವಿರೋಧ ಸಹಜ ಎಂದು ಸ್ಪಷ್ಟಪಡಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯದ ವಿಶ್ವಾಸ

ರಾಜ್ಯದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಳ ಬಗ್ಗೆ ಮಾತನಾಡಿದ ಸಿಎಂ, “ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಲಿದೆ. ಈ ಹಿಂದಿನ ಗೆಲುವುಗಳೇ ನಮಗೆ ದಿಕ್ಸೂಚಿಯಾಗಿದೆ,” ಎಂದರು. ಅಲ್ಲದೆ, ಸೋಮವಾರದಿಂದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು, ಏಪ್ರಿಲ್ 5ರಂದು ಕೇರಳ ರಾಜ್ಯದ ಪ್ರಚಾರಕ್ಕೂ ತೆರಳುವುದಾಗಿ ಮಾಹಿತಿ ನೀಡಿದರು.

ಸಿಎಂ ಬದಲಾವಣೆ ವದಂತಿಗೆ ತೆರೆ

ಮುಖ್ಯಮಂತ್ರಿ ಸ್ಥಾನದ ಗೊಂದಲದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಚುನಾವಣೆಗೂ ಸಿಎಂ ಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ಹೈಕಮಾಂಡ್ ಸೂಚನೆಯಂತೆ ನಾನೇ ಮುಂದಿನ ಎರಡು ವರ್ಷಗಳ ಕಾಲ ಬಜೆಟ್ ಮಂಡಿಸಲಿದ್ದೇನೆ,” ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಯ ವದಂತಿಗಳಿಗೆ ತೆರೆ ಎಳೆದರು.

ಡ್ರಗ್ಸ್ ದಂಧೆ: ತಪ್ಪಿತಸ್ಥರ ವಿರುದ್ಧ ಕ್ರಮ:

ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತಗೊಳಿಸುವುದು ನಮ್ಮ ಉದ್ದೇಶ. ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿರುವ ಬಗ್ಗೆ ತಿಳಿದುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಹೆಚ್ಚಿ, ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಬಗ್ಗೆ ಉತ್ತರಿಸಿ, ಟ್ರಾಫಿಕ್ ಸಿಗ್ನಲ್ ಗಳನ್ನು ಸುಗಮ ವಾಹನ ಸಂಚಾರಕ್ಕಾಗಿ ಅಳವಡಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist