ಬೆಂಗಳೂರು,(www.thenewzmirror.com):
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣೆ ಮುಂದುವರೆದಿದೆ.
ಇಂದು ಬೆಳಗ್ಗೆ 8 ಗಂಟೆಗೆ ಸೌಂದರ್ಯ ಪತಿ ಆಸ್ಪತ್ರೆಗೆ ತೆರಳಿದ್ದರು. 9 ತಿಂಗಳ ಮಗುವನ್ನ ಬಿಟ್ಟು ಸೌಂದರ್ಯ ಆತಹತ್ಯೆಗೆ ಶರಣಾಗಿದ್ದಾರೆ.






