ಬೆಂಗಳೂರು, (www thenewzmirror.com) :
ಎಲ್ಲ ಅಂದುಕೊಂಡಂತೆ ಆಗಿದ್ದರೆ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಇಂದು ಬಿಜೆಪಿ ಸೇರ್ಪಡೆ ಆಗಬೇಕಿತ್ತು. ಆದರೆ ಆ ಕಾರ್ಯಕ್ರಮ ದಿಢೀರ್ ಮುಂದೂಡಿಕೆಯಾಗಿದೆ.
ಅದೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ..!

ಬಿಎಸ್ ವೈ ಭೇಟಿ ಬಳಿಕ ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಅಷ್ಟೇ ಅಲ್ದೆ ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಎಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡುವುದಿಲ್ಲ. ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಮೋದಿ ಅವರ ಜನಪ್ರಿಯತೆ, ಯಡಿಯೂರಪ್ಪ ನಾಯಕತ್ವ, ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲಾ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ಸೇರಲಿರುವ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ.