ತೊಗರಿಬೆಳೆ ಹಾನಿ ಪರಿಹಾರ ಇತ್ಯರ್ಥ ಪ್ರಕ್ರಿಯೆ ಚುರುಕು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

RELATED POSTS

ಬೆಂಗಳೂರು(thenewzmirror.com): ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ  ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ವಿರೋಧಪಕ್ಷದ ನಾಯಕರಾದ ಛಲವಾದಿ ಟಿ. ನಾರಯಾಯಣಸ್ವಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಮತ್ತು ಸದಸ್ಯರಾದ ಶಶಿಲ್ ಜಿ.ನಮೋಶಿ, ಡಾ: ತಳವಾರ್ ಸಾಬಣ್ಣ, ವೈ.ಎಂ.ಸತೀಶ್, ಹೇಮಲತಾ ನಾಯಕ್ ಹಾಗೂ ನಿಯಮ 330ರ ಪ್ರಕಾರ ಕೃಷಿ ಸಚಿವರು ಉತ್ತರ ನೀಡಿದರು.

ರಾಜ್ಯದ ಕಲ್ಬುರ್ಗಿ, ವಿಜಯಪುರ, ಬೆಳಗಾವಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಮುಖ್ಯ ಬೆಳೆಯಾಗಿದ್ದು, ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿ ತೇವಾಂಶ ಕುಸಿತದಿಂದ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಲ್ಲ ಎಂಬುದನ್ನು ಪ್ರಯೋಗಾಲಯದ ಮೂಲಕ ಗುಣಮಟ್ಟ ಖಾತರಿ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ  ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಸಚಿವರು ವಿವರ ಒದಗಿಸಿದರು.

ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಯ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ  ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.  ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಅವರು ಸದನಕ್ಕೆ ಉತ್ತರ ನೀಡಿದರು.

ಕಲ್ಬುರ್ಗಿ ಜಿಲ್ಲೆಯಲ್ಲಿ 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು ನವೆಂಬರ್ ನಲ್ಲಿ ವಾಡಿಕೆಗಿಂತ ಅಧಿಕ ಮಳೆ ಕೊರತೆ ಉಂಟಾಗಿದೆ.  ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆಗಳ ಪ್ರಕಾರ ಶೇಕಡಾ 1.82 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ಶೇಕಡಾ 80 ರಷ್ಟು ಮಳೆ ಕೊರತೆಯಾಗಿದ್ದು ಜೊತೆಗೆ ಅಕ್ಟೋಬರ್ ಎರಡನೇ ವಾರದಿಂದ ಮಂಜಿನ ಭಾದೆ ಕೂಡಾ ತೀವ್ರಗೊಂಡು ಹೂವುಗಳು ಉದುರಿವೆ.ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 14,529 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ನವೆಂಬರ್ ಮಾಹೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆ ಉಂಟಾಗಿದೆ. ಇದೇ ರೀತಿ ಬೀದರ್ ನಲ್ಲಿ 2236 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಒಣಗಿರುವ ಬಗ್ಗೆ ವರದಿಯಾಗಿದೆ.  ಯಾದಗಿರಿ ಜಿಲ್ಲೆಯಲ್ಲಿ 194.20 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಹಾನಿಯಾಗಿದೆ ಎಂದು ಸಚಿವರು ವಿವರ ಒದಗಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಅಂದಾಜು 5.35ಲಕ್ಷ ಹೆಕ್ಷೇರ್ ಪ್ರದೇಶದಲ್ಲಿ ಬಿತ್ತನೆಗೊಂಡಿರುತ್ತದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2024ರ ನವೆಂಬರ್ ತಿಂಗಳಿನಲ್ಲಿ ವಾಡಿಕೆಯಂತೆ 21 ಮಿ. ಮೀ ಮಳೆಯಾಗಬೇಕಿದ್ದು, ಆದರೆ, ಕೇವಲ ವಾಸ್ತವವಾಗಿ 4.1 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.80 ರಷ್ಟು ಮಳೆ ಕೊರತೆಯಾಗಿರುತ್ತದೆ.ಬೆಳೆ ಕಟಾವು ಆದ ನಂತರ ಇಳುವರಿ ಆಧಾರದ ಮೇಲೆ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಮಾರ್ಗಸೂಚಿ ಅನ್ವಯ ಬೆಳೆ ವಿಮೆ ಇತ್ಯರ್ಥಪಡಿಸಲಾಗುವುದು. ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗಗಳು ಪೂರ್ಣವಾದ ತರುವಾಯ, ಇಳುವರಿಯಲ್ಲಿ ಕುಂಠಿತವಾಗುವ ಪ್ರಮಾಣವನ್ನು ಅಂದಾಜಿಸಬಹುದಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ತೊಗರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ ಬೆಲೆ:-

ಮಾರುಕಟ್ಟೆ ದರಕ್ಕಿಂತ ತೊಗರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಕಡಿಮೆ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ಗೆ ರೂ.450ಗಳ ಹೆಚ್ಚುವರಿ ಬೆಂಬಲ ಬೆಲೆ ಒದಗಿಸಿ ರೈತರ ನೆರವಿಗೆ ಧಾವಿಸಿದೆ.

2024-25ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ ರೂ.7,550/- ರಂತೆ ಕೇಂದ್ರ ಸರ್ಕಾರವು  ಬೆಂಬಲ ಬೆಲೆಯನ್ನು ಘೋಷಿಸಿರುತ್ತದೆ.  ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಧಾರಣೆಯಲ್ಲಿ ಮಾರಾಟವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಶಿಫಾರಸ್ಸಿನ ಅನ್ವಯ, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಗರಿಷ್ಠ 3,06,150 ಮೆಟ್ರಿಕ್ ಟನ್ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಕೋಲಾರ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ರೂ.7,550/-ರ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ರೂ.450/- ಗಳ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ಗೆ ರೂ.8,000/- ರಂತೆ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ PACS/TAPCMS/ FPO ಗಳ ಮೂಲಕ ಒಟ್ಟು 516 ಖರೀದಿ ಕೇಂದ್ರಗಳನ್ನು ತೆರೆದು ದಿ:05.03.2025 ರ ಅಂತ್ಯಕ್ಕೆ 79,409 ನೋಂದಾಯಿತ ರೈತರ ಪೈಕಿ, 19,323 ರೈತರಿಂದ 25,401 ಮೆಟ್ರಿಕ್ ಟನ್ ಪ್ರಮಾಣದ ತೊಗರಿಯನ್ನು ಖರೀದಿಸಲಾಗಿರುತ್ತದೆ.  ಖರೀದಿ ಪ್ರಕ್ರಿಯೆಯು ದಿ:02.04.2025 ರವರೆಗೂ ಚಾಲ್ತಿಯಲ್ಲಿರುತ್ತದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist